Top Newsಆರೋಗ್ಯರಾಜಕೀಯಸುದ್ದಿ

ಉಪರಾಷ್ಟ್ರಪತಿ ಜಗದೀಪ್ ಧನ್​ಖರ್​ಗೆ ಎದೆನೋವು; ಏಮ್ಸ್ ಆಸ್ಪತ್ರೆಗೆ ದಾಖಲು

ನವದೆಹಲಿ: ಉಪರಾಷ್ಟ್ರಪತಿ ಜಗದೀಪ್​ ಧನ್​ಖರ್ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರನ್ನು ಬೆಳಗಿನ ಜಾವ 2 ಗಂಟೆ ಸುಮಾರಿಗೆ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ಪ್ರಸ್ತುತ ಅವರನ್ನು ಕ್ರಿಟಿಕಲ್ ಕೇರ್ ಯೂನಿಟ್ ನಲ್ಲಿ ನಿಗಾದಲ್ಲಿ ಇರಿಸಲಾಗಿದೆ. ಏಮ್ಸ್‌ನ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ. ರಾಜೀವ್ ನಾರಂಗ್ ಅವರ ನೇತೃತ್ವದಲ್ಲಿ ಜಗದೀಪ್ ಧನ್​ಖರ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರ ತಂಡವು ಅವರ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ವರದಿ ತಿಳಿಸಿದೆ. ಉಪರಾಷ್ಟ್ರಪತಿ ಆರೋಗ್ಯ ಸ್ಥಿರವಾಗಿದ್ದು, ವೈದ್ಯಕೀಯ ಮೇಲ್ವಿಚಾರಣೆಯಲ್ಲಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

Comments (0)

Your email address will not be published. Required fields are marked *

Back to top button