Top Newsರಾಜ್ಯಸುದ್ದಿ

ರಾಜ್ಯಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ರಕ್ಷಣೆ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ; ಸಿಎಂ ಸಿದ್ದರಾಮಯ್ಯ

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಸಣಾಪುರದಲ್ಲಿ ವಿದೇಶಿ ಮಹಿಳೆ ಮೇಲೆ ನಡೆದ ಹಲ್ಲೆ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು,  ರಾಜ್ಯಕ್ಕೆ ಭೇಟಿ ನೀಡುವ ಪ್ರವಾಸಿಗರು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ರಕ್ಷಣೆ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ. ಇಸ್ರೇಲಿ ಪ್ರಜೆ ಹಾಗೂ ಹೋಮ್‌ ಸ್ಟೇ ಮಾಲಕಿ ಮೇಲೆ ನಡೆದ ಹಲ್ಲೆ ಹಾಗೂ ಅತ್ಯಾಚಾರ ಅತ್ಯಂತ ಹೇಯ ಕೃತ್ಯ. ಘಟನೆ ವರದಿಯಾದ ಕೂಡಲೇ ಸಂಬಂಧಪಟ್ಟ ಪೊಲೀಸರಿಂದ ಮಾಹಿತಿ ಪಡೆದು, ಕಟ್ಟುನಿಟ್ಟಿನ ತನಿಖೆ ಕೈಗೊಂಡು, ಅಪರಾಧಿಗಳನ್ನು ಶೀಘ್ರ ಪತ್ತೆಹಚ್ಚುವಂತೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ. ಇದೀಗ ಪ್ರಕರಣದ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ತನಿಖೆ ನಡೆಸಿದ್ದಾರೆ.

Comments (0)

Your email address will not be published. Required fields are marked *

Back to top button