Top Newsಕ್ರೈಂ ಸ್ಟೋರಿರಾಜ್ಯಸುದ್ದಿ

ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್; ಡಿಜಿಪಿ ರಾಮಚಂದ್ರ ವಿರುದ್ಧ ತನಿಖೆಗೆ ಆದೇಶ

ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್​ನಲ್ಲಿ ಅರೆಸ್ಟ್ ಆಗಿ ಸದ್ಯ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ರನ್ಯಾ ರಾವ್ ಪ್ರಕರಣದಲ್ಲಿ ಕೆಲ ಸಚಿವರ ಪಾತ್ರವಿದೆ ಎಂದು ತಿಳಿದುಬಂದಿತ್ತು. ಸದ್ಯ ಈ ಪ್ರಕರಣದಲ್ಲಿ ಇದೀಗ ರನ್ಯಾ ಮಲತಂದೆ ಡಿಜಿಪಿ ರಾಮಚಂದ್ರರಾವ್​ಗೆ ಇದೀಗ ಸಂಕಷ್ಟ ಎದುರಾಗಿದೆ.

ನಟಿ ರನ್ಯಾಗೆ ವಿಮಾನ ನಿಲ್ದಾಣದಲ್ಲಿ ಪ್ರೋಟೋಕಾಲ್ ನೀಡಿದ ಬಗ್ಗೆ ತನಿಖೆ ನಡೆಸಿ ಒಂದು ವಾರದ ಒಳಗೆ ವರದಿ ಸಲ್ಲಿಸುವಂತೆ ಕರ್ನಾಟಕ ಗೃಹ ಇಲಾಖೆ ಆದೇಶ ನೀಡಿದೆ. ಗೋಲ್ಡ್ ಸ್ಮಗ್ಲಿಂಗ್ ಕೇಸ್​ನಲ್ಲಿ ರಾಮಚಂದ್ರರಾವ್ ಕೂಡ ಶಾಮಿಲಾಗಿದ್ದಾರೆಯೇ? ದುಬೈನಿಂದ ಬೆಂಗಳೂರಿಗೆ ಗೋಲ್ಡ್ ಸ್ಮಗ್ಲಿಂಗ್ ಮಾಡುವುದರಲ್ಲಿ ಪ್ರೋಟೋಕಾಲ್ ದುರ್ಬಳಕೆ ಆಗಿದೆಯೇ ಎಂಬ ಕುರಿತು ಒಂದು ವಾರದ ಒಳಗೆ ತನಿಖೆ ನಡೆಸಲು ಸೂಚಿಸಲಾಗಿದೆ.

Comments (0)

Your email address will not be published. Required fields are marked *

Back to top button