ಬಾಂಗ್ಲಾದೇಶದ ನಾಲ್ವರು ನುಸುಳುಕೋರರನ್ನು ಬಂಧಿಸಿ ನೆರೆಯ ದೇಶಕ್ಕೆ ಗಡಿಪಾರು ಮಾಡಲಾಗಿದೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ. ಅವರನ್ನು ಅಬ್ದುಲ್ ಕಬೀರ್, ಬೋದಿಯರ್ ರೆಹಮಾನ್, ಎಂ.ಡಿ. ತಯೂಬ್ ಮತ್ತು ಅಬ್ದುಲ್ ಕಲಾಂ ಎಂದು ಗುರುತಿಸಲಾಗಿದೆ.
ಈ ಕುರಿತು ಸೋಮವಾರ ಮಧ್ಯರಾತ್ರಿ ಎಕ್ಸ್ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡ ಸಿಎಂ ಹಿಮಂತ ಬಿಸ್ವಾ ಶರ್ಮಾ, ನಾಲ್ವರು ಅಕ್ರಮ ನುಸುಳುಕೋರರನ್ನು ಬಂಧಿಸಿ ಗಡೀಪಾರು ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಒಳನುಸುಳುವಿಕೆಯನ್ನು ಎದುರಿಸಲು ತಮ ಪ್ರಯತ್ನಗಳನ್ನು ಮುಂದುವರೆಸುತ್ತಾ, 4 ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಿ ಗಡಿಯುದ್ದಕ್ಕೂ ಹಿಂದಕ್ಕೆ ತಳ್ಳಲಾಗಿದೆ ಎಂದು ತಿಳಿಸಿದ್ದಾರೆ.


