
ಮಾರಿಷಸ್ ನ ಅತ್ಯುನ್ನತ ಗೌರವಕ್ಕೆ ಪ್ರಧಾನಿ ನರೇಂದ್ರ ಮೋದಿ ಭಾಜನರಾಗಿದ್ದಾರೆ.
ಮಾರಿಷಸ್ ದೇಶದ ಅತ್ಯುನ್ನತ ಗೌರವವಾದ ‘ದಿ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಮತ್ತು ಕೀ ಆಫ್ ದಿ ಇಂಡಿಯನ್ ಓಶಿಯನ್’ ಅನ್ನು ಇಂದು ದ್ವೀಪ ರಾಷ್ಟ್ರದಲ್ಲಿ ನಡೆದ ಸಮಾರಂಭದಲ್ಲಿ ಮಾರಿಷಸ್ ಅಧ್ಯಕ್ಷ ಧರಮ್ ಗೋಖೂಲ್ ಅವರು ಪ್ರದಾನ ಮಾಡಿದರು.
ಭಾರತ ಮತ್ತು ಮಾರಿಷಸ್ ನಡುವಿನ ಬಾಂಧವ್ಯವನ್ನು ಬಲಪಡಿಸಲು ನೀಡಿದ ಕೊಡುಗೆಗಳನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಈ ಪ್ರತಿಷ್ಠಿತ ಪ್ರಶಸ್ತಿ ಪಡೆಯುತ್ತಿರುವ ಮೊದಲ ಭಾರತೀಯ ನರೇಂದ್ರ ಮೋದಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇನ್ನು ಇದು ಪ್ರಧಾನಿ ನರೇಂದ್ರ ಮೋದಿಗೆ ವಿದೇಶಿ ರಾಷ್ಟ್ರದಿಂದ ನೀಡುತ್ತಿರುವ 21ನೇ ಅಂತಾರಾಷ್ಟ್ರೀಯ ಪ್ರಶಸ್ತಿಯಾಗಿದೆ.




