ರಾಜಕೀಯರಾಜ್ಯಸುದ್ದಿ

ರನ್ಯಾ ರಾವ್ ಕೇಸ್; ಸಿಐಡಿ ತನಿಖೆ ವಾಪಸ್ ಬಗ್ಗೆ ಸ್ಪಷ್ಟನೆ ನೀಡಿದ ಗೃಹ ಸಚಿವ ಪರಮೇಶ್ವರ್

ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್​​ನಲ್ಲಿ ಪೋಲಿಸ್ ಪ್ರೊಟೋಕಾಲ್ ಉಲ್ಲಂಘನೆ ಆಗಿದೆ ಎಂಬ ಆರೋಪ ಕೇಳಿ ಬಂದ ಬೆನ್ನಲ್ಲೆ ರಾಜ್ಯ ಸರ್ಕರ ಸಿಐಡಿ ತನಿಖೆಗೆ ಆದೇಶಿಸಿತ್ತು. ಆದರೆ 24 ಗಂಟೆಗಳೊಳಗೆ ವಾಪಸ್ ಪಡೆಯಲಾಗಿತ್ತು. ಈ ಬಗ್ಗೆ ಗೃಹಸಚಿವ ಜಿ. ಪರಮೇಶ್ವರ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ‘ಪೊಲೀಸ್ ಪ್ರೊಟೊಕಾಲ್ ಉಲ್ಲಂಘನೆ ಬಗ್ಗೆ ತಿಳಿದುಕೊಳ್ಳಲು ನಾನು ಸಿಐಡಿ ತನಿಖೆಗೆ ಆದೇಶಿಸಿದೆ. ಅಷ್ಟರೊಳಗಾಗಲೇ ಸಿಎಂ ಕಚೇರಿಯಿಂದ ಮೇಲ್ಮಟ್ಟದ ತನಿಖೆಗೆ ಆದೇಶ ನೀಡಲಾಗಿತ್ತು. ಒಂದೇ ವಿಚಾರಕ್ಕೆ ಎರಡು ಕಡೆ ತನಿಖೆ ಆಗೋದು ಬೇಡ ಎಂಬ ಕಾರಣಕ್ಕೆ ನಾವು ಸಿಐಡಿ ತನಿಖೆಯನ್ನು ಹಿಂಪಡೆದೆವು, ತನಿಖೆಗೆ ಆದೇಶ ನೀಡಲೂ ಯಾರು ಒತ್ತಡ ಹೇರಿರಲಿಲ್ಲ. ಹಿಂದಕ್ಕೆ ಪಡೆಯಲೂ ಯಾರೂ ಒತ್ತಡ ಹೇರಿಲ್ಲ. ಎರಡೇರಡು ತನಿಖೆ ಬೇಡ ಎಂಬ ಕಾರಣಕ್ಕೆ ನಾವು ಹಿಂಪಡೆದಿದ್ದೇವೆ ಅಷ್ಟೇ. ಇಲ್ಲಿ ಯಾವುದೇ ಗೊಂದಲ ಬೇಡ ಎಂದು ಸ್ಪಷ್ಟನೆ ನೀಡಿದರು.

Comments (0)

Your email address will not be published. Required fields are marked *

Back to top button