
ಬೆಂಗಳೂರು: ಕ್ಷೇತ್ರ ಪುನರ್ ವಿಂಗಡನೆ ಸಂಬಂಧಿಸಿದಂತೆ ನಡೆಯಲಿರುವ ದಕ್ಷಿಣ ರಾಜ್ಯಗಳ ಸಭೆಗೆ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಆಹ್ವಾನಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿದ ಅವರು, ಕೇಂದ್ರ ಸರ್ಕಾರ ದಕ್ಷಿಣ ರಾಜ್ಯಗಳ ವಿರುದ್ಧ ಪಿತೂರಿ ನಡೆಸುತ್ತಿದೆ. ನಾವು ಇದನ್ನು ಒಪ್ಪಲು ಸಾಧ್ಯವಿಲ್ಲ. ಬಿಜೆಪಿ ಸೇಡಿನ ರಾಜಕೀಯ ಮಾಡುತ್ತಿದೆ. ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಅವರ ನಿಲುವನ್ನು ನಾನು ಒಪ್ಪುತ್ತೇನೆ. ಈ ಸಂಬಂಧ ಮಾರ್ಚ್ 22ರಂದು ನಡೆಯಲಿರುವ ಸಭೆಗೆ ಕಾರಣಾಂತರಗಳಿಂದ ನಾನು ಹೋಗಕು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಭೆಗೆ ಹಾಜರಾಗಲು ಕೇಳಿಕೊಂಡಿದ್ದೇನೆ ಎಂದಿದ್ದಾರೆ.
ಒಕ್ಕೂಟ ತತ್ವಗಳು ಮತ್ತು ರಾಜ್ಯಗಳ ಹಕ್ಕುಗಳನ್ನು ರಕ್ಷಿಸಲು ನಾವು ಬದ್ದರಾಗಿದ್ದೇವೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.




