Top Newsರಾಜಕೀಯರಾಜ್ಯ

ಕರಾವಳಿಯಲ್ಲಿ ಟೆಂಪಲ್ ಟೂರಿಸಂ ಅಭಿವೃದ್ದಿಪಡಿಸಿ; ಸರ್ಕಾರಕ್ಕೆ ಶಾಸಕ ಸುನೀಲ್ ಕುಮಾರ್ ಮನವಿ

ಬೆಂಗಳೂರು: ಕರಾವಳಿಯಲ್ಲಿ ಟೆಂಪಲ್ ಟೂರಿಸಂ ಅಭಿವೃದ್ದಿಪಡಿಸಿ, ಅದಕ್ಕಾಗಿ ಬೇಕಾದ ಮೂಲಭೂತ ಸೌಕರ್ಯಗಳನ್ನು ನೀಡಬೇಕೆಂದು ಕಾರ್ಕಾಳ ಶಾಸಕ ಸುನೀಲ್ ಕುಮಾರ್ ಮನವಿ ಮಾಡಿದ್ದಾರೆ.

ಈ ಕುರಿತು ವಿಧಾನಸಭಾ ಸದನದಲ್ಲಿ ಮಾತನಾಡಿದ ಅವರು, ಕರಾವಳಿಯಲ್ಲಿ ಟೆಂಪಲ್ ಟೂರಿಸಂ ಅಭಿವೃದ್ದಿ ಪಡಿಸಿ, ಅದಕ್ಕೆ ಬೇಕಾದ ಮೂಲಭೂತ ಸೌಕರ್ಯಗಳನ್ನು ನೀಡಬೇಕು. ಇಕೋ ಟೂರಿಸಂಗೆ ಬೇಕಾದ ಒಳ್ಳೆಯ ಅವಕಾಶ, ಪರಿಸರ ಕರಾವಳಿ ಭಾಗದಲ್ಲಿದೆ. ಹಾಗೇ, ಬೀಚ್ ಟೂರಿಸಂ ಮೂಲಕ ಕರಾವಳಿ ಭಾಗದ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಬೇಕು‌. ಕರಾವಳಿ ಭಾಗದ ಬಂದರುಗಳನ್ನು ಅಭಿವೃದ್ಧಿಪಡಿಸಿದರೆ ನೂರಾರು ಕೋಟಿಯ ಹೂಡಿಕೆ, ಉದ್ಯೋಗಗಳು ಇಲ್ಲಿ ಸೃಷ್ಟಿಯಾಗುತ್ತದೆ. ಎತ್ತಿನಹೊಳೆ ಯೋಜನೆಗೆ ಪರಿಹಾರವಾಗಿ ಕರಾವಳಿ ಭಾಗಕ್ಕೆ ಪಶ್ಚಿಮವಾಹಿನಿ ಯೋಜನೆ ಜಾರಿಗೆ ತರಲಾಗಿತ್ತು. ಆದರೆ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಬಳಿಕ ಪಶ್ಚಿಮವಾಹಿನಿ ಯೋಜನೆಯಡಿಯಲ್ಲಿ ಕರಾವಳಿ ಭಾಗಕ್ಕೆ ರಾಜ್ಯ ಸರ್ಕಾರ ಅನುದಾನ ನೀಡಿಲ್ಲ ಎಂದು ಹೇಳಿದರು

Comments (0)

Your email address will not be published. Required fields are marked *

Back to top button