ಕ್ರೈಂ ಸ್ಟೋರಿರಾಜ್ಯಸುದ್ದಿ

ಗೋಲ್ಡ್ ಸ್ಮಗ್ಲಿಂಗ್ ಕೇಸ್; 2 ಆರೋಪಿ ತರುಣ್ ರಾಜುಗೆ 14ದಿನ ನ್ಯಾಯಾಂಗ ಬಂಧನ

ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್​ನಲ್ಲಿ ಎರಡನೇ ಆರೋಪಿಯಾದ ತರುಣ್ ರಾಜುನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ತರುಣ್ ರಾಜು ಅವರ ಕಂದಾಯ ಗುಪ್ತಚರ ನಿರ್ದೇಶನಾಲಯದ  ಕಸ್ಟಡಿ ಅಂತ್ಯಗೊಂಡ ನಂತರ ನ್ಯಾಯಾಧೀಶ ವಿಶ್ವನಾಥ್ ಸಿ. ಗೌಡರ್ ಈ ಆದೇಶ ಹೊರಡಿಸಿದ್ದಾರೆ. ಎರಡನೇ ಆರೋಪಿಯನ್ನು ಈಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಬಹುದು ಎಂದು ಡಿಆರ್‌ಐ ನ್ಯಾಯಾಲಯಕ್ಕೆ ತಿಳಿಸಿದೆ.

ಗುರುವಾರ, ಇ.ಡಿ  ಬೆಂಗಳೂರಿನ ಕುಮಾರ ಪಾರ್ಕ್ ಪೂರ್ವ ರಸ್ತೆಯಲ್ಲಿರುವ ರನ್ಯಾ ರಾವ್ ಅವರ ಆಪ್ತ ಸ್ನೇಹಿತ  ತರುಣ್ ರಾಜು ಮನೆ ಮೇಲೆ ದಾಳಿ ನಡೆಸಿತ್ತು.

Comments (0)

Your email address will not be published. Required fields are marked *

Back to top button