ರಾಜ್ಯಸುದ್ದಿ

ಸಮವಸ್ತ್ರದಲ್ಲೇ ಸ್ವಾಮೀಜಿ ಕಾಲಿಗೆ ನಮಸ್ಕಾರ; 6 ಜನ ಪೋಲಿಸರನ್ನು ವರ್ಗಾವಣೆ ಮಾಡಿದ ಎಸ್​ಪಿ

ಬಾಗಲಕೋಟೆ: ಸಿದ್ದನಕೊಳ್ಳ ಶಿವಕುಮಾರ ಸ್ವಾಮೀಜಿ ಕಾಲಿಗೆ ಪೊಲೀಸರು ನಮಸ್ಕಾರ ಮಾಡಿ, ಹಣ ಪಡೆದಿದ್ದ ವಿಡಿಯೋವೊಂದು ಭಾರಿ ವೈರಲ್ ಆಗಿತ್ತು. ಅಲ್ಲದೇ ಸಾರ್ವಜನಿಕರ ಆಕ್ರೋಶಕ್ಕೂ ಗುರಿಯಾಗಿತ್ತು. ಸ್ವಾಮೀಜಿಗೆ ನಮಸ್ಕಾರ ಮಾಡಲಿ, ಆದರೆ ಸಮವಸ್ತ್ರದಲ್ಲಿ ನಮಸ್ಕಾರ ಮಾಡುವುದಲ್ಲದೇ ಹಣ ಕೂಡ ಪಡೆದಿದ್ದು ಎಷ್ಟರ ಮಟ್ಟಿಗೆ ಸರಿ ಎಂದು ಬಾರಿ ಟೀಕೆ ವ್ಯಕ್ತವಾಗಿತ್ತು. ಹೀಗಿರುವಾಗಲೇ ವರ್ಗಾವಣೆ ಅಸ್ತ್ರ ಪ್ರಯೋಗ ಮಾಡಲಾಗಿದೆ. ಆರು ಜನ ಕಾನ್ಸ್ಟೇಬಲ್​​ಗಳನ್ನು ವರ್ಗಾವಣೆ  ಮಾಡಿ ಬಾಗಲಕೋಟೆ ಎಸ್​ಪಿ ಅಮರನಾಥ ರೆಡ್ಡಿ ಆದೇಶ ಹೊರಡಿಸಿದ್ದಾರೆ.

ಎಎಸ್​ಐ ಬಜಿ ದಳವಾಯಿ, ಡಿಜೆ ಶಿವಪುರ, ನಾಗರಾಜ ಅಂಕೋಲೆ, ಜಿಬಿ ಅಂಗಡಿ, ರಮೇಶ್ ಈಳಗೇರ, ರಮೇಶ್ ಹುಲ್ಲೂರು ಅವರನ್ನು ಬಾದಾಮಿ ಠಾಣೆಯಿಂದ ವಿವಿಧ ಠಾಣೆಗೆ ವರ್ಗಾವಣೆ ಮಾಡಿ ಎಸ್​ಪಿ  ಅಮರನಾಥ ರೆಡ್ಡಿ ಆದೇಶ ಮಾಡಿದ್ದಾರೆ.

Comments (0)

Your email address will not be published. Required fields are marked *

Back to top button