ರಾಜಕೀಯರಾಜ್ಯಸುದ್ದಿ

ಬಿಜೆಪಿ ತೆಕ್ಕೆಗೆ ಬೆಳಗಾವಿ ಮಹಾನಗರ ಪಾಲಿಕೆ

ಬೆಳಗಾವಿ: ಬೆಳಗಾವಿಯ 23ನೇ ಮೇಯರ್ ಆಗಿ ಮಂಗೇಶ ಪವಾರ ಹಾಗೂ ಉಪಮೇಯರ್ ಆಗಿ ವಾಣಿ ವಿಲಾಸ ಜೋಶಿ ಪ್ರಚಂಡ ಬಹುಮತದಿಂದ ಆಯ್ಕೆಯಾಗಿದ್ದಾರೆ.

ತೀವ್ರ ಕುತೂಹಲ ಮೂಡಿಸಿದ್ದ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಚುನಾವಣಾಧಿಕಾರಿ ಕೈ ಎತ್ತುವ ಮೂಲಕ ಮೇಯರ್ ಹಾಗೂ ಉಪಮೇಯರ್ ಆಯ್ಕೆಗೆ ಅವಕಾಶ ನೀಡಿದ್ದರು. ಮಂಗೇಶ್ ಪರವಾಗಿ 40 ಮತಗಳು ಹಾಗೂ ವಿರುದ್ಧವಾಗಿ 5 ಮತಗಳು ಹಾಗೂ ವಾಣಿ ವಿಲಾಸ ಜೋಶಿ ಪರವಾಗಿ 40 ಮತಗಳು ಹಾಗೂ ವಿರುದ್ಧವಾಗಿ 19ಮತಗಳು ಬಂದಿದ್ದವು. ಮೇಯ‌ರ್ ಸ್ಥಾನ ಸಾಮಾನ್ಯ ಹಾಗೂ ಉಪಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. 40 ಸದಸ್ಯರನ್ನು ಹೊಂದಿರುವ ಬಿಜೆಪಿ ಗುಂಪು ಮತ್ತೊಮ್ಮೆ ಪಾಲಿಕೆ ಅಧಿಕಾರ ಹಿಡಿದಿದೆ.

ಶಾಸಕ ಅಭಯ ಪಾಟೀಲ, ಸಂಸದ ಜಗದೀಶ್ ಶೆಟ್ಟರ್, ವಿಧಾನ ಪರಿಷತ್ ಸದಸ್ಯ ರವಿಕುಮಾರ, ಮಾಜಿ ಶಾಸಕ ಅನಿಲ ಬೆನಕೆ, ಮಹಾಂತೇಶ ಕವಟಗಿಮಠ, ಡಾ. ಪ್ರಭಾಕರ ಕೋರೆ ಅವರು ಈ ಆಯ್ಕೆಯ ಉಸ್ತುವಾರಿ ವಹಿಸಿದ್ದರು.

Comments (0)

Your email address will not be published. Required fields are marked *

Back to top button