ಕ್ರೈಂ ಸ್ಟೋರಿರಾಜ್ಯಸುದ್ದಿ

ಬಂಧನದ ವೇಳೆ ಹಲ್ಲೆಗೆ ಯತ್ನ: ಇಬ್ಬರು ಆರೋಪಿಗಳ ಕಾಲಿಗೆ ಗುಂಡೇಟು, ಪೊಲೀಸರಿಗೂ ಗಾಯ

ಹುಬ್ಬಳ್ಳಿ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮನೆ ಬಳಿ ದರೋಡೆ ಮಾಡಿದ್ದ ಇಬ್ಬರು ಕಳ್ಳರ ಕಾಲಿಗೆ ಪೊಲೀಸರು ಗುಂಡೇಟು ಹೊಡೆದು ಬಂಧಿಸಿದ್ದಾರೆ. ಅಂತಾರಾಜ್ಯ ಕಳ್ಳರಾದ ಇರ್ಷಾದ್ ಹಾಗೂ ಅಕ್ಬರ್ ಬಂಧಿತರು.

ಆರೋಪಿಗಳು ಕಾಲಿಗೆ ಹುಬ್ಬಳ್ಳಿಯ ಉಪನಗರ ಪೊಲೀಸರು ಗುಂಡು ಹಾರಿಸಿದ್ದಾರೆ. ಆರೋಪಿಗಳ ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದು, ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಕಾರ್ಯಾಚರಣೆ ವೇಳೆ, ಮೂವರು ಪೊಲೀಸ್ ಸಿಬ್ಬಂದಿಗೆ ಗಾಯವಾಗಿದ್ದು, ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಭೇಟಿ ನೀಡಿ, ಪೊಲೀಸ್ ಸಿಬ್ಬಂದಿಯ ಆರೋಗ್ಯ ವಿಚಾರಿಸಿದ್ದಾರೆ.

ಪೊಲೀಸರಿಂದ ಗುಂಡೇಟು ತಿಂದ ಆರೋಪಿಗಳನ್ನು ಸಹ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments (0)

Your email address will not be published. Required fields are marked *

Back to top button