ರಾಜ್ಯಸುದ್ದಿ

ಮಾರ್ಚ್ 23ಕ್ಕೆ ಕೆಂಪೇಗೌಡ ಒಕ್ಕಲಿಗರ ಸಂಘ ಉದ್ಘಾಟನಾ ಮಹೋತ್ಸವ

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲೂಕಿನ ಬೂರಗಮಾಕಲಹಳ್ಳಿಯ ಶ್ರೀ ಸೀತಾರಾಮ ಕಲ್ಯಾಣ ಮಂಟಪದಲ್ಲಿ  ಕರ್ನಾಟಕ ಕೆಂಪೇಗೌಡ ಒಕ್ಕಲಿಗರ ಸಂಘ ಉದ್ಘಾಟನಾ ಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಇದೇ 23ರಂದು ಸಮಾರಂಭ ನಡೆಯಲಿದ್ದು, ಒಕ್ಕಲಿಗರ ಸಂಘದ ಅಧ್ಯಕ್ಷರಾದ ಜಿ.ಎಸ್ ರಘುನಾಥರೆಡ್ಡಿ ಸುದ್ದಿಗೋಷ್ಠಿಯಲ್ಲಿ ಸಮಾರಂಭದ ಮಾಹಿತಿ ನೀಡಿದರು. ಈ ಕಾರ್ಯಕ್ರಮಕ್ಕೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರುಗಳಾದ ಸನ್ಮಾನ್ಯ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮಿಗಳು, ಸನ್ಮಾನ್ಯ ಶ್ರೀ ಶ್ರೀ ಶ್ರೀ ಮಂಗಳಾನಂದನಾಥಸ್ವಾಮೀಜಿರವರು, ಹಾಗೂ ಶಾಸಕ ಜಿ.ಟಿ ದೇವೆಗೌಡ ಹಾಗೂ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡರವರು ಸೇರಿದಂತೆ ವಿವಿಧ ಒಕ್ಕಲಿಗ ಮುಖಂಡರು ಭಾಗವಹಿಸಲಿದ್ದಾರೆ. ಸಮುದಾಯದ ಎಲ್ಲರೂ ಕಾರ್ಯಕ್ರಮಕ್ಕೆ ಬರಬೇಕೆಂದು ಅವರು ಮನವಿ ಮಾಡಿದರು.

 

Comments (0)

Your email address will not be published. Required fields are marked *

Back to top button