Top Newsಸುದ್ದಿ

ಕೇಂದ್ರ ಸಚಿವ ಹೆಚ್​ಡಿಕೆ ವಿರುದ್ಧ ಒತ್ತುವರಿ ಆರೋಪ; ಹೈಕೋರ್ಟ್ ಆದೇಶದಂತೆ ಒತ್ತುವರಿ ಕಾರ್ಯ ಆರಂಭ

ಕೇಂದ್ರ ಸಚಿವ, ಹೆಚ್​​.ಡಿ.ಕುಮಾರಸ್ವಾಮಿ ವಿರುದ್ಧ ರಾಮನಗರದ ಬಿಡದಿಯಲ್ಲಿ ಭೂ ಒತ್ತುವರಿ ಮಾಡಿಕೊಂಡ ಆರೋಪ ಕೇಳಿ ಬಂದಿತ್ತು. ಒತ್ತುವರಿ ತೆರವು ಮಾಡುವಂತೆ ಹೈಕೋರ್ಟ್​ನಿಂದ ಖಡಕ್ ಸೂಚನೆಯೂ ಕೂಡ ಬಂದಿತ್ತು. ಹೈಕೋರ್ಟ್ ಆದೇಶದ ಪ್ರಕಾರ ಕಂದಾಯ ಇಲಾಖೆ ಈಗ ಒತ್ತುವರಿ ಕಾರ್ಯಾಚರಣೆಗೆ ಮುಂದಾಗಿದೆ.

ಪ್ರಕರಣ ಸಂಬಂಧ ಕಂದಾಯ ಇಲಾಖೆ ಎಸ್​ಐಟಿ ರಚನೆ ಮಾಡಿಕೊಂಡಿತ್ತು ಬಿಡದಿಯ ಕೇತಗಾನಹಳ್ಳಿಯ ಸರ್ವೆ ನಂಬರ್ 7,8,9,10,16,17 ಮತ್ತು 79ರಲ್ಲಿ ಭೂ ಒತ್ತುವರಿಯಾಗಿದೆ ಎಂದು ಆರೋಪ ಕೇಳಿ ಬಂದಿತ್ತು. 14 ಎಕರೆ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಳ್ಳಲಾಗಿದೆ ಎಂಬ ಆರೋಪದ ವಿಚಾರದಲ್ಲಿ ತೆರವು ಕಾರ್ಯಾಚರಣೆ ಮಾಡಲು ಹೈಕೋರ್ಟ್ ಆದೇಶ ನೀಡಿತ್ತು.

ಈ ಹಿನ್ನೆಲೆ ಕಂದಾಯ ಇಲಾಖೆ ಹಾಗೂ ಸರ್ವೆ ಇಲಾಖೆಯಿಂದ ಜಂಟಿ ಸರ್ವೇ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿ ಇಂದು ಒತ್ತುವರಿ ಭೂಮಿಯ ತೆರವು ಕಾರ್ಯಾಚರಣೆಗೆ ಕಂದಾಯ ಇಲಾಖೆ ಮುಂದಾಗಿದೆ.

Comments (0)

Your email address will not be published. Required fields are marked *

Back to top button