ರಾಜ್ಯಸುದ್ದಿ

ಭೀಮಾ ನದಿಗೆ ಎರಡು ಟಿಎಂಸಿ ನೀರು ಬಿಡುವಂತೆ ಆಗ್ರಹಿಸಿ ರೈತ ಸಂಘದಿಂದ ಪ್ರತಿಭಟನೆ

ಕಲಬುರಗಿ: ಭೀಮಾ ನದಿಗೆ ಎರಡು ಟಿಎಂಸಿ ನೀರು ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.

ನಗರದ ಡಿಸಿ ಕಚೇರಿ ಮುಂದೆ ಕರ್ನಾಟಕ ಪ್ರಾಂತ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ಬೇಸಿಗೆಯಲ್ಲಿ ಭೀಮಾ ನದಿ ಬತ್ತುತ್ತದೆ. ಜನರಿಗೆ ಕುಡಿಯಲು, ಜಾನುವಾರುಗಳಿಗೆ ಹಾಗೂ ಬೆಳೆಗಳಿಗೆ ತೊಂದರೆ ಆಗುತ್ತದೆ. ಹಾಗಾಗಿ ಉಜನಿ ಜಲಾಶಯದಿಂದ ನೀರು ಬಿಡುಗಡೆ ಮಾಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಒತ್ತಾಯಿಸಲು ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗೆ ರೈತ ಸಂಘದಿಂದ ಮನವಿ ಮಾಡಲಾಯಿತು.

Comments (0)

Your email address will not be published. Required fields are marked *

Back to top button