
ಯಾದಗಿರಿ: ಫ್ರೀಡಂ ಟಿವಿ ವರದಿಯ ಬೆನ್ನಲ್ಲೇ ಯಾದಗಿರಿ ಜಿಲ್ಲೆಯ ವಡಗೇರಾ ತಾಲ್ಲೂಕು ಕೇಂದ್ರದಲ್ಲಿರುವ ಬಸ್ ನಿಲ್ದಾಣಕ್ಕೆ ಸಾರಿಗೆ ಅಧಿಕಾರಿಗಳು ಭೇಟಿ ನೀಡಿ ಮೂಲಭೂತ ಸೌಕರ್ಯ ಒದಗಿಸುವ ಭರವಸೆ ನೀಡಿದ್ದಾರೆ.
ಮೂಲ ಸೌಕರ್ಯಗಳನ್ನು ಒದಗಿಸುವಂತೆ ರೈತ ಸಂಘದ ನೇತೃತ್ವದಲ್ಲಿ ಒತ್ತಾಯಿಸಲಾಗಿತ್ತು. ಈ ಬಗ್ಗೆ ಫ್ರೀಡಂ ಟಿವಿ ವಿಸ್ತೃತ ವರದಿ ಪ್ರಸಾರ ಮಾಡಿತ್ತು. ಈ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆ ಇಲಾಖೆಯ ಎಇಇ ಅಶೋಕ್ ರವರು ಮಂಗಳವಾರ ಮಧ್ಯಾಹ್ನ ವಡಗೇರಾ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಬಗ್ಗೆ ಮಾತನಾಡಿದ ಅವರು, ಕೂಡಲೇ ಕುಡಿಯುವ ನೀರಿನ ವ್ಯವಸ್ಥೆಯ ಜೊತೆಗೆ ಸ್ವಚ್ಛತೆಗೆ ಆದ್ಯತೆ ನೀಡಿ, ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತೇವೆ. ಒಂದು ವಾರದ ಒಳಗಾಗಿ ಈ ಬಗ್ಗೆ ಕ್ರಮ ಕೊಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಈ ವೇಳೆ ರೈತ ಸಂಘದ ವಿವಿಧ ಮುಖಂಡರು ಉಪಸ್ಥಿತರಿದ್ದರು.




