ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವತಿಯಿಂದ ಪದ್ಮಭೂಷಣ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆ ಶ್ರೀರಾಮನ ಪ್ರಾಣ ಪ್ರತಿಷ್ಟೇ ಕಾರ್ಯಕ್ರಮಕ್ಕೆ ಆಹ್ವಾನವನ್ನು ದ.ಕ ಜಿಲ್ಲಾ ಸಂಘ ಪರಿವಾರದ ವತಿಯಿಂದ ನೀಡಲಾಯಿತು.
ಸಹ ಸಂಘ ಚಾಲಕ್ ಸುನಿಲ್ ಆಚಾರ್, ಮಂಗಳೂರು ಜಿಲ್ಲಾ ವಿಎಚ್ ಪಿ ಅಧ್ಯಕ್ಷ ಎಚ್.ಕೆ ಪುರುಷೋತ್ತಮ್, ಉಪಾಧ್ಯಕ್ಷ ಮನೋಹರ್ ಸುವರ್ಣ, ಪುತ್ತೂರು ವಿಭಾಗ ಉಪಾಧ್ಯಕ್ಷ ಡಾ.ಕೃಷ್ಣಪ್ರಸನ್ನ, ಬಜರಂಗದಳ ಜಿಲ್ಲಾ ಸಂಚಾಲಕ ಭರತ್ ಕುಮ್ಡೇಲು, ವಿಎಚ್ಪಿ ಮಂಗಳೂರು ಕಾರ್ಯದರ್ಶಿ ಶಿವಾನಂದ ಮೆಂಡನ್ ಮತ್ತಿತರರು ಉಪಸ್ಥಿತರಿದ್ದರು.