ರಾಜ್ಯಶಿಕ್ಷಣ

SSLC ವಿದ್ಯಾರ್ಥಿಗಳಿಗೆ ಭಾವನಾತ್ಮಕ ಬೆಂಬಲ ಮುಖ್ಯ; ಸ್ಪೀಕರ್ ಯು.ಟಿ.ಖಾದರ್

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಎಸ್​ಎಸ್​ಎಲ್​ಸಿ ಪರೀಕ್ಷೆ ಆರಂಭವಾಗಿದ್ದು, 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಈ ಸಂದರ್ಭದಲ್ಲಿ ಪೋಷಕರು ವಿದ್ಯಾರ್ಥಿಗಳಿಗೆ ಭಾವನಾತ್ಮಕ ಬೆಂಬಲ ನೀಡುವುದು ಮುಖ್ಯ ಎಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ.

ವಿಧಾಸಭೆಯಲ್ಲಿಂದು ವಿದ್ಯಾರ್ಥಿಗಳಿಗೆ ಶುಭಕೋರಿ ಮಾತನಾಡಿದ ಅವರು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ವಿದ್ಯಾರ್ಥಿಗಳ ಭವಿಷ್ಯಕ್ಕೆ ಮೊದಲನೇ ಹಂತ, ಅದು ಅಂತ್ಯವಲ್ಲ ಆರಂಭ. ರಾತ್ರಿ ಹಗಲೆನ್ನದೇ ಪರಿಶ್ರಮ ಪಟ್ಟು ಪರೀಕ್ಷೆಗೆ ಸಿದ್ಧರಾಗಿರುವ ಎಲ್ಲಾ ವಿದ್ಯಾರ್ಥಿಗಳು ಮನೋ ಸ್ಥೈರ್ಯದಿಂದ ಪರೀಕ್ಷೆ ಎದುರಿಸಬೇಕು ಎಂದರು.

ಇನ್ನು ರಾಜ್ಯದಲ್ಲಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಫ್ರೀ ಬಸ್​ ವ್ಯವಸ್ಥೆ ಕಲ್ಪಿಸಲಾಗಿದೆ ಎಂದ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಸಾಲಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಯಾವುದೇ ಗ್ರೇಸ್ ಮಾರ್ಕ್ಸ್ ಇಲ್ಲದೇ ಪರೀಕ್ಷೆಗಳನ್ನು ಬರೆಯುತ್ತಿದ್ದಾರೆ. ಎಲ್ಲಾ ವಿದ್ಯಾರ್ಥಿಗಳು ಉತ್ತಮವಾಗಿ ಪರೀಕ್ಷೆ ಬರೆದು ತೇರ್ಗಡೆ ಹೊಂದಲಿ ಎಂದು ಶುಭ ಹಾರೈಸಿದರು

Comments (0)

Your email address will not be published. Required fields are marked *

Back to top button