ರಾಜಕೀಯ
ಡಿಸಿಎಂ ಡಿಕೆಶಿ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಕಲಬುರಗಿ: ಮುಸ್ಲಿಂ ಮೀಸಲಾತಿ ವಿಚಾರವಾಗಿ ಡಿಸಿಎಂ ಡಿಕೆಶಿ ನೀಡಿದ್ದಾರೆ ಎನ್ನಲಾದ ಹೇಳಿಕೆ ಈಗ ಬಿಜೆಪಿಗರಿಗೆ ಅಸ್ತ್ರವಾಗಿದೆ.
ಕಲಬುರಗಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದರು.
ಲೋಕಸಭಾ ಚುನಾವಣೆ ಸಂಧರ್ಭದಲ್ಲಿ ಸಿದ್ದರಾಮಯ್ಯ ಡಿಕೆಶಿ ಸಹಿತ ರಾಹುಲ್ ಗಾಂಧಿ ಹೇಳಿದ್ರು. ಬಿಜೆಪಿ ಅಧಿಕಾರಕ್ಕೆ ಬಂದ್ರೆ ಸಂವಿಧಾನ ಬದಲಾವಣೆ ಮಾಡ್ತೇವೆ ಅಂತಾ ಅಪಪ್ರಚಾರ ಮಾಡಿದ್ರು. ಸ್ವಾತಂತ್ರ್ಯ ಬಂದ ನಂತರ ಸಂವಿಧಾನಕ್ಕೆ ಅತಿ ಹೆಚ್ಚು ಬದಲಾವಣೆ ಮಾಡಿದ್ದು ಕಾಂಗ್ರೆಸ್. ಡಿಸಿಎಂ ಡಿಕೆಶಿ ಹೇಳಿಕೆಯಿಂದ ಇವರ ಬಂಡವಾಳ ಬಯಲಾಗಿದೆ. ಅಲ್ಪಸಂಖ್ಯಾತರ ಒಲೈಕೆಗಾಗಿ ಇವರು ಸಂವಿಧಾನ ಬದಲಾವಣೆ ಮಾಡ್ತೇವೆ ಅಂತಾ ಹೇಳಿದ್ದಾರೆ. ಅಂಬೇಡ್ಕರ್ ಅವರಿಗೆ ಇವರು ಎಷ್ಟು ಗೌರವ ಕೊಡ್ತಾರೆ ಅಂತಾ ಗೊತ್ತಾಗಿದೆ ಅಂತಾ ವಿಜಯೇಂದ್ರ ಗುಡಿಗಿದರು.




