ರಾಜ್ಯಸುದ್ದಿ

ವಿದ್ಯಾರ್ಥಿಗಳು ಶಾಲೆಗಳಲ್ಲಿ ಶೌಚಾಲಯಗಳನ್ನು ತೊಳೆದರೆ ತಪ್ಪಿಲ್ಲ ; ಯುಟಿ ಖಾದರ್​

ಮಂಗಳೂರು : ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಶೌಚಾಲಯಗಳನ್ನು ತೊಳೆದರೆ ತಪ್ಪಿಲ್ಲ ಎಂಬ ಹೇಳಿಕೆಯನ್ನು ವಿಧಾನಸಭೆ ಸ್ಪೀಕರ್​​ ಯುಟಿ ಖಾದರ್​ ಸಮರ್ಥಿಸಿಕೊಂಡಿದ್ವಿದಾರೆ. ವಿದ್ಯಾರ್ಥಿಯಾಗಿದ್ದಾಗ ನಾನು ಕೂಡ ಶಾಲೆಯ ಶೌಚಾಲಯವನ್ನು ತೊಳೆದಿದ್ದೇನೆ. ಮಕ್ಕಳ ಶೌಚಾಲಯವನ್ನ ಮಕ್ಕಳೆ ಸ್ವಚ್ಛಗೊಳಿಸಿದರೆ ತಪ್ಪಿಲ್ಲ. ಇದು ಶಿಕ್ಷಣದ ಒಂದು ಭಾಗ ಎಂದು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ನರಿಂಗಾನ ಗ್ರಾಮದಲ್ಲಿ ಮಾತನಾಡಿದ ಅವರು, ಶಾಲೆಯ ಶೌಚಾಲಯವನ್ನು ವಿದ್ಯಾರ್ಥಿಗಳಾಗಿದ್ದಾಗ ನಾವೇ ಕ್ಲೀನ್​​ ಮಾಡುತ್ತಿದ್ದೆವು. ಅದು ಶಿಕ್ಷಣಾ ಒಂದು ಭಾಗ. ಮಕ್ಕಳು ಸ್ವಾವಲಂಭಿಗಳಾಗಬೇಕು ಅಂತಾ ನಮ್ಮ ಮನೆಯಲ್ಲೂ ಕೂಡ ಮಕ್ಕಳಿಗೆ ಅದನ್ನು ಕಲಿಸುತ್ತೇವೆ. ಸ್ವಚ್ಛತೆ ಬಗ್ಗೆ ಅರಿವು ಮೂಡಲು ಕೈಗೆ ಗ್ಲೌಸ್​ ಹಾಕಿ ಶೌಚಾಲಯ ಕ್ಲೀನ್​ ಮಾಡಿಸಬೇಕು ಆದರೆ ಒತ್ತಾಯಪೂರ್ವಕವಾಗಿ ಸ್ವಚ್ಛಗೊಳಿಸಬಾರದು.

Comments (0)

Your email address will not be published. Required fields are marked *

Back to top button