ಕ್ರೈಂ ಸ್ಟೋರಿ

ಇನ್ಸ್ಟಾ ರೀಲ್ಸ್ ಶೋಕಿ; ಪರಪ್ಪನ ಅಗ್ರಹಾರದಿಂದ ರಜತ್, ವಿನಯ್ ರಿಲೀಸ್

ಬೆಂಗಳೂರು: ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಬಿಗ್​ಬಾಸ್ ಸ್ಪರ್ಧಿಗಳಾದ ರಜತ್ ಕಿಶನ್ ಹಾಗೂ ವಿನಯ್ ಗೌಡ ಇಂದು ರಿಲೀಸ್ ಆಗಿದ್ದಾರೆ.

ರೀಲ್ಸ್ ಪ್ರಕರಣದಲ್ಲಿ ಇಬ್ಬರಿಗೂ 24ನೇ ಎಸಿಎಂಎಂ ಕೋರ್ಟ್ ನಿನ್ನೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಆದರೆ ಸಮಯಕ್ಕೆ ಸರಿಯಾಗಿ ಜಾಮೀನು ಆದೇಶ ಪ್ರತಿ ತಲುಪದ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಜೈಲಿನಲ್ಲೇ ಕಳೆದಿದ್ದರು. ಇಂದು ಬಿಡುಗಡೆಗೆ ಸಂಬಂಧಿಸಿದ ಎಲ್ಲಾ ಪ್ರಕ್ರಿಯೆಗಳನ್ನು ಪೂರೈಸಿ ರಿಲೀಸ್ ಆಗಿದ್ದಾರೆ. ಇಬ್ಬರು ಒಂದು ಕೈಯಲ್ಲಿ ಬ್ಯಾಗ್ ಹಿಡಿದು, ಇನ್ನೊಂದು ಕೈಯಲ್ಲಿ ಸೇಬು ಹಣ್ಣು ತಿನ್ನುತ್ತ ಹೊರ ಬಂದಿದ್ದಾರೆ.

ಇನ್ಟಾಗ್ರಾಮ್​ ರೀಲ್ಸ್​ ಮಾಡುವ ಶೋಕಿಗೆ ಬಿಗ್ ಬಾಸ್​ ಮಾಜಿ ಸ್ಪರ್ಧಿಗಳಾದ ರಜತ್, ವಿನಯ್ ಗೌಡ ಮಚ್ಚು ಹಿಡಿದು ವಿಡಿಯೋ ಮಾಡಿದ್ದರು. ಹೀಗಾಗಿ ಈ ಇಬ್ಬರ ಮೇಲೆ ​ಶಸ್ತ್ರಾಸ್ತ್ರ ಕಾಯ್ದೆಯಡಿ FIR ​ದಾಖಲಾಗಿತ್ತು. ಬಳಿಕ ವಿಚಾರಣೆಗೆ ಬರುವಂತೆ ಪೊಲೀಸರು ಸೂಚನೆ ಕೊಟ್ಟಿದ್ದರು. ಆದ್ರೆ, ವಿನಯ್​ ಗೌಡ ಹಾಗೂ ರಜತ್​ ಕಿಶನ್ ಫೈಬರ್​ ಮಚ್ಚು ನೀಡಿ ಯಾಮಾರಿಸಿದ್ದರು. ಹೀಗಾಗಿ ಪೊಲೀಸರು ಆ ರಿಯಲ್ ಮಚ್ಚಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಈ ಮಧ್ಯೆ ಆರೋಪಿಗಳು ಜಾಮೀನು ಪಡೆದುಕೊಂಡಿದ್ದಾರೆ.

Comments (0)

Your email address will not be published. Required fields are marked *

Back to top button