Wednesday, January 28, 2026
20.2 C
Bengaluru
Google search engine
LIVE
ಮನೆರಾಜಕೀಯಬೆಲೆ ಏರಿಕೆ ವಿರೋಧಿಸಿ ಬಿಜೆಪಿಯಿಂದ ಅಹೋರಾತ್ರಿ ಧರಣಿ

ಬೆಲೆ ಏರಿಕೆ ವಿರೋಧಿಸಿ ಬಿಜೆಪಿಯಿಂದ ಅಹೋರಾತ್ರಿ ಧರಣಿ

ಬೆಂಗಳೂರು: ಬೆಲೆ ಏರಿಕೆ ವಿರೋಧಿಸಿ ಏಪ್ರಿಲ್ 2ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೆಳಗ್ಗೆ 11 ಗಂಟೆಯಿಂದ ಅಹೋ ರಾತ್ರಿ ಧರಣಿ ಆರಂಭಿಸಲು ಪಕ್ಷದ ನಾಯಕರ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸಲು ಏಪ್ರಿಲ್ 2ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೆಳಗ್ಗೆ 11 ಗಂಟೆಯಿಂದ ಅಹೋ ರಾತ್ರಿ ಧರಣಿ ಆರಂಭಿಸಲು ಪಕ್ಷದ ನಾಯಕರ ಸಭೆಯಲ್ಲಿ ನಿರ್ಧರಿಸಲಾಗಿದೆ. ಈ ಧರಣಿಯಲ್ಲಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು, ಪಕ್ಷದ ವತಿಯಿಂದ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಗಳು, ಜಿಲ್ಲಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ, ಏಪ್ರಿಲ್ 4ರಂದು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಏಪ್ರಿಲ್ 5ರಂದು ಎಲ್ಲಾ ಮಂಡಲಗಳಲ್ಲಿ ರಾಜ್ಯ ಸರ್ಕಾರದ ಬೆಲೆ ಏರಿಕೆ ವಿರೋಧಿಸಿ ಬೃಹತ್ ಪ್ರತಿಭಟನೆ ಮಾಡಲು ನಿರ್ಧರಿಸಲಾಗಿದೆ, ಬಿಜೆಪಿಯ 18 ಶಾಸಕರನ್ನು ವಿಧಾನಸಭೆ ಕಲಾಪದಿಂದ 6 ತಿಂಗಳ ಕಾಲ ಅಮಾನತು ಮಾಡಿರುವ ವಿಧಾನಸಭಾಧ್ಯಕ್ಷರ ನಡೆ ಅಸಂವಿಧಾನಿಕ. ವಿಧಾನ ಸಭಾಧ್ಯಕ್ಷಕರು 18 ಬಿಜೆಪಿ ಶಾಸಕರ ಅಮಾನತು ಆದೇಶವನ್ನು ಹಿಂಪಡೆಯುವ ತನಕ ಶಾಸಕರು, ವಿಧಾನ ಪರಿಷತ್ ಸದಸ್ಯರು ಯಾವುದೇ ಸಮಿತಿಯ ಸಭೆಗಳಲ್ಲಿ ಭಾಗವಹಿಸುವುದಿಲ್ಲ. ಸ್ಪೀಕರ್ ತಮ್ಮ ನಿರ್ಧಾರವನ್ನು ಕೂಡಲೇ ಹಿಂಪಡೆಯಬೇಕು ಎಂದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments