ಸಿನಿಮಾ

ಎಂಪುರಾನ್ ಸಿನಿಮಾದ ಸುತ್ತ.. ವಿವಾದಗಳ ಹುತ್ತ..

L2 ಎಂಪುರಾನ್​ ಸಿನಿಮಾ ರಿಲೀಸ್​ ಆದ ಮೂರೇ ದಿನಕ್ಕೆ ವಿವಾದದ ಸುಳಿಯಲ್ಲಿ ಸಿಲುಕಿದೆ. ಇದರಿಂದ ಎಚ್ಚೆತ್ತ ಚಿತ್ರತಂಡ 17 ದೃಶ್ಯಗಳಿಗೆ ಕತ್ತರಿ ಹಾಕಲು ನಿರ್ಧರಿಸಿದೆ. ಈ ಬೆನ್ನಲ್ಲೆ ನಾಯಕ ಮೋಹನ್​ ಲಾಲ್​ ತಮ್ಮ ಅಭಿಮಾನಿಗಳಿಗೆ ಕ್ಷಮೆಯಾಚಿಸಿದ್ದಾರೆ.

ಮಾರ್ಚ್ 27ರಂದು ತೆರೆ ಕಂಡ ಮೋಹನ್ ಲಾಲ್, ಪೃಥ್ವಿರಾಜ್‌ ಸುಕುಮಾರನ್‌ ಅಭಿನಯದ ಎಲ್2: ಎಂಪುರಾನ್ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ರಿಲೀಸ್‌ ಆದ 2ನೇ ದಿನದಲ್ಲಿ 100 ಕೋಟಿ ಬಾಚಿಕೊಂಡಿದ್ದು, ಬಾಕ್ಸ್‌ ಆಫೀಸ್‌ ಸೇರಿದೆ. ಸದ್ಯ ಈ ಸಿನಿಮಾದಲ್ಲಿ 2002ರ ಗುಜರಾತ್ ಗಲಭೆಯನ್ನು ಉಲ್ಲೇಖ ಮಾಡಲಾಗಿದೆ. ಜೊತೆಗೆ ಈ ಘಟನೆಯನ್ನು ತಿರುಚಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಸಿನಿಮಾದ 17 ದೃಶ್ಯಗಳಿಗೆ ಕತ್ತರಿ ಹಾಕಲು ಚಿತ್ರತಂಡ ನಿರ್ಧರಿಸಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಮೋಹನ್‌ ಲಾಲ್‌ ಅಭಿಮಾನಿಗಳಿಗೆ ಕ್ಷಮೆ ಕೋರಿದ್ದಾರೆ.

L2: ಎಂಪುರಾನ್ ಚಿತ್ರದಿಂದ ಅಭಿಮಾನಿಗಳಿಗೆ ಉಂಟಾದ ನೋವಿಗೆ ನಾನು ಕ್ಷಮೆ ಕೋರುತ್ತೇನೆ. ಕೆಲ ದೃಶ್ಯಗಳಲ್ಲಿ ಗುಜರಾತ್‌ ಗಲಭೆಯ ಉಲ್ಲೇಖ ಮಾಡಲಾಗಿದೆ ಎಂಬ ಕಾರಣಕ್ಕೆ ಚಿತ್ರತಂಡವು 17 ದೃಶ್ಯಗಳನ್ನು ತೆಗೆದುಹಾಕಲು ನಿರ್ಧರಿಸಿದೆ.

ಲೂಸಿಫರ್‌ನ 2ನೇ ಭಾಗವಾದ ಎಂಪುರಾನ್ ಚಿತ್ರದಲ್ಲಿ ಹೊರಹೊಮ್ಮಿದ ಕೆಲವು ರಾಜಕೀಯ, ಸಾಮಾಜಿಕ ವಿಷಯಗಳು ನನ್ನ ಅನೇಕ ಅಭಿಮಾನಿಗಳಿಗೆ ನಿರಾಸೆ ತರಿಸಿದೆ. ಕಲಾವಿದನಾಗಿ ನನ್ನ ಯಾವುದೇ ಚಲನಚಿತ್ರಗಳು ರಾಜಕೀಯ ಚಳವಳಿ, ಪರಿಕಲ್ಪನೆ ಅಥವಾ ಧರ್ಮದ ಬಗ್ಗೆ ದ್ವೇಷ ಭಾವನೆ ಮೂಡಿಸದಂತೆ ನೋಡಿಕೊಳ್ಳುವುದು ನನ್ನ ಕರ್ತವ್ಯ. ಹಾಗಾಗಿ ಎಂಪುರಾನ್‌ ತಂಡದ ಪರವಾಗಿ ನನ್ನ ಅಭಿಮಾನಿಗಳಿಗೆ ಕ್ಷಮೆ ಕೇಳುತ್ತೇನೆ. ಈ ಚಿತ್ರಕ್ಕಾಗಿ ಕೆಲಸ ಮಾಡಿದ ಪ್ರತಿಯೊಬ್ಬರಿಗೂ ಜವಾಬ್ದಾರಿ ಇದೆ. ಹಾಗಾಗಿ ಧಕ್ಕೆ ತರುವ ಕೆಲ ದೃಶ್ಯಗಳನ್ನು ತೆಗೆದುಹಾಕಲು ತಂಡ ನಿರ್ಧರಿಸಿದೆ ಎಂದು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

Comments (0)

Your email address will not be published. Required fields are marked *

Back to top button