ರಾಜಕೀಯ

ಯತ್ನಾಳ್ ವಿರುದ್ಧ RSS ಮುಖಂಡ ಕೆಂಡ

ಮಂಡ್ಯ: ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ಆಗಿದ್ದಾರೆ. ಈ ಬಗ್ಗೆ ರಾಜ್ಯ ರಾಜಕಾರಣದಲ್ಲಿ ಚರ್ಚೆಗಳಾಗುತ್ತಿರುವ ಸಂದರ್ಭದಲ್ಲೇ ಆರ್​​ಎಸ್​ಎಸ್​ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ್​ ಭಟ್​​ ಈ ಕುರಿತು ಹೇಳಿಕೆ ನೀಡಿದ್ದಾರೆ.

ಮಾಧ್ಯಮದ ಜೊತೆ ಮಾತನಾಡಿದ ಅವರು,  ಯಾರಾದ್ರೂ ಆಗಿರಲಿ, ನಾಮ ಹಾಕಿದ ಮಾತ್ರಕ್ಕೆ ಹಿಂದೂತ್ವ ಆಗುತ್ತಾ? ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡಿದ್ರೆ ಮಾತ್ರ ಹಿಂದೂತ್ವ ಆಗುತ್ತಾ? ಹಿಂದುತ್ವದಲ್ಲಿ ಒಂದು ಶಿಸ್ತಿದೆ. ಪಕ್ಷದ ಸಂಘಟನೆಯಲ್ಲೂ ಒಂದು ಅನುಶಾಸನ ಇದೆ ಎಂದು ಹೇಳಿದ್ದಾರೆ

ಇನ್ನು ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಿರುವುದನ್ನು ಕಲ್ಲಡ್ಕ ಪ್ರಭಾಕರ್ ಭಟ್​​ ಸಮರ್ಥಿಸಿಕೊಂಡರು.

ಹಿಂದುತ್ವವಾದಿ ಎಂದು ಏನು ಬೇಕಾದರೂ ಮಾತನಾಡುವುದಲ್ಲ. ಮಾತನಾಡುವಾಗ ಪ್ರಜ್ಞೆ ಇರಬೇಕು. ಮಾತಿನ ಮೇಲೆ ನಿಗಾವಹಿಸಬೇಕು.ಒಂದು ಸಂಘಟನೆಯಲ್ಲಿದ್ದಾಗ ಮಾತು ಗಡಿ ಮೀರಿ ಹೋಗಬಾರದು. ಪಕ್ಷದ ಸಮಿತಿ ಒಳಗೆ ಮಾತನಾಡಬೇಕು. ಬೀದಿಯಲ್ಲಿ ಮಾತನಾಡುವುದು ಹಿಂದುತ್ವದ ಲಕ್ಷಣ ಅಲ್ಲ. ಹಿಂದುತ್ವದಲ್ಲಿ ಶಿಸ್ತು ಇದೆ. ಅದು ಇಲ್ಲದಿದ್ದರೆ ಹಿಂದುತ್ವವಾದಿ ಆಗಲು ಸಾಧ್ಯವಿಲ್ಲ. ಪಕ್ಷದಲ್ಲಿ ಶಿಸ್ತಿನಿಂದ ಇರದಿದ್ದರೆ ಇಂತಹ ಸಮಸ್ಯೆ ಆಗುತ್ತವೆ ಎಂದು ತಿಳಿಸಿದರು.

Comments (0)

Your email address will not be published. Required fields are marked *

Back to top button