ರಾಜಕೀಯ

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ?

ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೆ.ಅಣ್ಣಾಮಲೈ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಆ ಸ್ಥಾನಕ್ಕೆ ಬೇರೆಯವರನ್ನು ಅಧ್ಯಕ್ಷರನ್ನಾಗಿ ಬಿಜೆಪಿ ನೇಮಿಸಲಿದೆ ಎಂದು ಮೂಲಗಳು ತಿಳಿಸಿವೆ.

2023 ರಲ್ಲಿ ಎಐಎಡಿಎಂಕೆ ಮತ್ತು ಬಿಜೆಪಿ ವಿಭಜನೆಯಾಗಲು ಅಣ್ಣಾಮಲೈ ಕಾರಣ ಎನ್ನಲಾಗಿತ್ತು. ಈಗ ಪಕ್ಷಗಳ ನಡುವಿನ ಮೈತ್ರಿ ಮಾತುಕತೆಗಳು ವೇಗಗೊಂಡಿದ್ದು, ಅಣ್ಣಾಮಲೈ ಬಿಜೆಪಿ ತಮಿಳುನಾಡು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಬಹುದು ಎನ್ನಲಾಗಿದೆ.

ಮುಂದಿನ ವರ್ಷ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ-ಎಐಎಡಿಎಂಕೆ ಮೈತ್ರಿಕೂಟ ರಚನೆಯಾಗುವ ಬಗ್ಗೆ ಚರ್ಚೆ ನಡೆಯುತ್ತಿರುವ ನಡುವೆಯೇ, ಕೆ ಅಣ್ಣಾಮಲೈ ಬಿಜೆಪಿ ತಮಿಳುನಾಡು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ಸಾಧ್ಯತೆ ಇದೆ.

ಚುನಾವಣೆ ಸಮೀಪಿಸುತ್ತಿರುವ ರಾಜ್ಯದಲ್ಲಿ ಬಿಜೆಪಿ ತನ್ನ ಹೆಜ್ಜೆಗುರುತು ಹೆಚ್ಚಿಸಲು ಪ್ರಯತ್ನಿಸುತ್ತಿರುವ ಜಾತಿ ಸಮೀಕರಣಗಳನ್ನು ಪರಿಗಣಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗುತ್ತಿದೆ ಎನ್ನಲಾಗಿದೆ.

ಕೇಂದ್ರ ಗೃಹಸಚಿವ ಅಮಿತ್​ ಶಾ ಅವರ ನೇತೃತ್ವದಲ್ಲಿ ನಡೆದ ಬಿಜೆಪಿ ಹೈಕಮಾಂಡ್​ ಸಭೆಯಲ್ಲಿ ಚರ್ಚೆಯಾದ ವಿಷಯಗಳನ್ನು ಅಣ್ಣಾಮಲೈ ಅವರಿಗೆ ತಿಳಿಸಲಾಗಿದೆ ಅಂತ ಹೇಳಲಾಗಿದೆ.

Comments (0)

Your email address will not be published. Required fields are marked *

Back to top button