ಕ್ರಿಕೆಟ್

IPL ಫ್ಯಾನ್ಸ್​​ಗೆ ಗುಡ್​ನ್ಯೂಸ್​​; ತಡರಾತ್ರಿವರೆಗೂ ಸಂಚರಿಸಿದೆ ಮೆಟ್ರೋ

ಬೆಂಗಳೂರು: ನಾಳೆ ಬೆಂಗಳೂರಿನ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​​ಸಿಬಿ ವಿರುದ್ಧ ಗುಜರಾತ್​ ಟೈಟನ್ಸ್​​ ಪಂದ್ಯ ನಡೆಯಲಿದೆ. ಈ ಹಿನ್ನಲೆಯಲ್ಲಿ ನಾಳೆ ಮೆಟ್ರೋ ಸಂಚಾರ ಅವಧಿ ವಿಸ್ತರಿಸಿ BMRCL ಆದೇಶ ಹೊರಡಿಸಿದೆ.

ಬೆಂಗಳೂರು: ಏ.2ರಂದು ಬೆಂಗಳೂರಿನಲ್ಲಿ ಈ ಸೀಸನ್‌ನ ಮೊದಲ ಐಪಿಎಲ್  ಪಂದ್ಯ ನಡೆಯಲಿದೆ. ಈ ಹಿನ್ನೆಲೆ ಬೆಂಗಳೂರಿನಲ್ಲಿ ನಡೆಯುವ ಎಲ್ಲಾ ಐಪಿಎಲ್ ಪಂದ್ಯಾವಳಿಗಳಿಗೆ ಮೆಟ್ರೋ ಸೇವೆ ವಿಸ್ತರಿಸಲಾಗಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

ಬೆಂಗಳೂರಿನಲ್ಲಿ ಒಟ್ಟು 7 ಮ್ಯಾಚ್‌ಗಳು ನಡೆಯಲಿವೆ. 7 ಪಂದ್ಯಗಳು ನಡೆಯುವ ದಿನ ಮೆಟ್ರೋ (ಸೇವೆ ವಿಸ್ತರಣೆ ಮಾಡಲಾಗಿದೆ. ಮೆಟ್ರೋ ರೈಲು ಸೇವೆಯನ್ನು ರಾತ್ರಿ 12:30ರವರೆಗೂ ವಿಸ್ತರಿಸಿದೆ ಎಂದು BMRCL ತಿಳಿಸಿದೆ.

ಚಲ್ಲಘಟ್ಟ, ಮಾದಾವರ, ರೇಷ್ಮೆ ಸಂಸ್ಥೆ ಮತ್ತು ವೈಟ್‌ಫೀಲ್ಡ್ ಮಾರ್ಗಗಳಲ್ಲಿ ಮಧ್ಯ ರಾತ್ರಿ 12:30ರವರೆಗೂ ಮೆಟ್ರೋ ಸಂಚರಿಸಲಿದೆ. ಮೆಜೆಸ್ಟಿಕ್‌ನಿಂದ ಕೊನೆಯ ರೈಲು ನಾಲ್ಕು ಟರ್ಮಿನಲ್‌ಗಳಿಗೂ ಮಧ್ಯರಾತ್ರಿ 1:15ಕ್ಕೆ ಹೊರಡಲಿದೆ. ಏ.8, ಏ.10, ಏ.18, ಏ.24, ಮೇ 3, 13 ಮತ್ತು 17ರಂದು ಬೆಂಗಳೂರಿನಲ್ಲಿ ಐಪಿಎಲ್ ಮ್ಯಾಚ್ ನಡೆಯಲಿವೆ. ನಾಳೆ (ಏ.2) ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಮತ್ತು ಜಿಟಿ ತಂಡದ ನಡುವೆ ಮೊದಲ ಪಂದ್ಯ ನಡೆಯಲಿದೆ.

Comments (0)

Your email address will not be published. Required fields are marked *

Back to top button