ರಾಜಕೀಯ
ವಕ್ಫ್ ಬಿಲ್ ಮಂಡನೆಗೆ ನಾಳೆಯೇ ಮುಹೂರ್ತ

ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರವು ಏ. 2ರಂದು ಲೋಕಸಭೆಯಲ್ಲಿ ಮಂಡಿಸಲಿದೆ.
ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಕುರಿತಾದ ಚರ್ಚೆಗೆ 8 ಗಂಟೆಗಳ ಸಮಯ ಮೀಸಲಿಡಲಾಗಿದೆ. ಜತೆಗೆ, ಬುಧವಾರವೇ ಲೋಕಸಭೆಯಲ್ಲಿ ಮಸೂದೆಯನ್ನು ಅಂಗೀಕರಿಸಿ ಮರುದಿನ ರಾಜ್ಯಸಭೆಯಲ್ಲಿ ಮಂಡಿಸಲು ಸರ್ಕಾರ ತಯಾರಿ ನಡೆಸಿದೆ.
ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅಧ್ಯಕ್ಷತೆಯಲ್ಲಿ ನಡೆದ ಬಿಎಸಿ ಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯ ಚರ್ಚೆಗೆ 12 ಗಂಟೆಗಳ ಕಾಲಾವಕಾಶ ಕೋರಲಾಗಿದೆ. ಈ ಬೆನ್ನಲ್ಲೇ ದೇಶಾದ್ಯಂತ ಮುಸ್ಲಿಂ ಬಾಂಧವರು ವಕ್ಫ್ ಕಾಯ್ದೆ ವಿರೋಧಿಸಿ ಕಪ್ಪು ಬಟ್ಟೆ ಧರಿಸಿ ಪ್ರತಿಭಟಿಸುತ್ತಿದ್ದಾರೆ.




