ಕ್ರೈಂ ಸ್ಟೋರಿ

ಬಸ್​​ನಲ್ಲೇ ನೇಣಿಗೆ ಶರಣಾದ ಡ್ರೈವರ್​

ಬೆಳಗಾವಿ : ರಜೆ ನೀಡಲಿಲ್ಲ ಎಂಬ ಕಾರಣಕ್ಕೆ ಮನನೊಂದ ಬಸ್‌ ಚಾಲಕನೊಬ್ಬ ಬಸ್‌ನಲ್ಲಿಯೇ ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ನಡೆದಿದೆ.

ನಗರದ 2ನೇ ಘಟಕದ ಬಸ್ ಚಾಲಕ ಇಲ್ಲಿನ ಹಳೆ ಗಾಂಧಿನಗರದ ನಿವಾಸಿ ಬಾಲಚಂದ್ರ ಶಿವಪ್ಪ ಹುಕ್ಕೋಜಿ (47) ಸಾವಿಗೆ ಶರಣಾದವರು. ಶಹಾಪುರ ನಾಕಾದಿಂದ ವಡಗಾವಿಗೆ ಸಂಚರಿಸುವ ಬಸ್ಸಿನಲ್ಲಿ ಅವರು ಚಾಲಕರಾಗಿದ್ದರು. ಅದೇ ಬಸ್ಸಿನಲ್ಲಿ ಬುಧವಾರ ನಸುಕಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಲಚಂದ್ರ ಹೂಕೋಜಿ ಹಲವು ದಿನಗಳಿಂದ ರಜೆ ಕೇಳುತ್ತಿದ್ದರಂತೆ ಆದರೆ ಹಿರಿಯ ಅಧಿಕಾರಿಗಳು ರಜೆ ನೀಡಿರಲಿಲ್ಲವಂತೆ. ಈಗ ತನ್ನ ಅಕ್ಕನ ಮಗಳ ಮದುವೆ ಇದೆ. ಅದಕ್ಕಾಗಿ ರಜೆ ಬೇಕು ಎಂದು ಕೇಳಿದ್ದರಂತೆ ಆದಾಗ್ಯೂ ರಜೆ ನೀಡಿದೆ ಇರುವದರಿಂದ ಮನನೊಂದು ಬಸ್ಸಿನಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Comments (0)

Your email address will not be published. Required fields are marked *

Back to top button