ರಾಜಕೀಯ

ಮುಡಾ ಕೇಸ್​ನಲ್ಲಿ ಸಿಎಂಗೆ ಮತ್ತೆ ಸಂಕಷ್ಟ; ಇಡಿ ತನಿಖೆಗೆ ‘ಹೈ’ ಅಸ್ತು

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಇ.ಡಿ.ಗೆ ಹೈಕೋರ್ಟ್​ ಅಸ್ತು ಎಂದಿದೆ. ಸಿಎಂ ಸಿದ್ದರಾಮಯ್ಯ ಅವರ ಪತ್ನಿ, ಕುಟುಂಬವು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ವೇಳೆ ಅಕ್ರಮ ನಡೆಸಿದ್ದಾರೆ ಎಂಬ ಆರೋಪ ಇದಾಗಿದೆ.

ಸಿಎಂ ಸಿದ್ದರಾಮಯ್ಯ ಅವರು ತಮ್ಮ ಪತ್ನಿ ಪಾರ್ವತಿ ಅವರಿಗೆ ಅಕ್ರಮವಾಗಿ 14 ನಿವೇಶನಗಳನ್ನು ನೀಡಿದ್ದಾರೆ ಎಂಬ ಆರೋಪವಾಗಿದ್ದು, ಈ ಬಗ್ಗೆ ವಿಸ್ತೃತವಾದ ತನಿಖೆ ನಡೆಸುವ ಅಗತ್ಯವಿದೆ ಎಂದು ಇಡಿ ಹೇಳಿದೆ.

ಈಗಾಗಲೇ ಈ ಬಗ್ಗೆ ಲೋಕಾ ವರದಿ ಬಂದಿದೆ. ಲೋಕಾ ಎಸ್​.ಪಿ..ಉದೇಶ್​ ಅವರಿಂದ ನ್ಯಾಯಾಲಯಕ್ಕೆ 11.200 ಪುಟಗಳ ವರದಿ ಸಲ್ಲಿಕೆ ಮಾಡಿದ್ದು, ಸಾಕ್ಷ್ಯಾಧಾರ ಕೊರತೆಯಿದೆ. ಆರೋಪ ಸಾಬೀತಾಗಿಲ್ಲ ಎಂದು ವರದಿಯಲ್ಲಿ 50 ಮಂದಿಯ ಹೇಳಿಕೆಯನ್ನು ದಾಖಲಿಸಲಾಗಿದೆ.

ಆದ್ರೆ, ಲೋಕಾ ವರದಿ ತಿರಸ್ಕರಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಇಡಿ ಮೇಲ್ಮನವಿ ಸಲ್ಲಿಸಿದೆ. ಈ ನಡುವೆ ಮುಡಾ ಮಾಜಿ ಆಯುಕ್ತ ಡಿಬಿ ನಟೇಶ್ ಅವರ ಹೇಳಿಕೆಯನ್ನು ಆಧರಿಸಿ ಹೈಕೋರ್ಟ್​​ ಇಡಿ ತನಿಖೆಗೆ ಅನುಮತಿ ನೀಡಿದೆ.

Comments (0)

Your email address will not be published. Required fields are marked *

Back to top button