ರಾಜ್ಯ

ಹಿರಿಯ IPS ಅಧಿಕಾರಿ​ ಹೇಮಂತ್​ ನಿಂಬಾಳ್ಕರ್​ಗೆ ಮುಖ್ಯಮಂತ್ರಿಗಳ ಸ್ವರ್ಣ ಪದಕ ಪ್ರದಾನ

ಬೆಂಗಳೂರು: ರಾಜ್ಯದಲ್ಲಿ ನಕ್ಸಲ್​ ಚಟುವಟಿಕೆಗಳಿಗೆ ನಾಂದಿಹಾಡಲು ವಿಶೇಷ ಮುತುವರ್ಜಿಯಿಂದ ಪೋಲಿಸ್​ ಕಾರ್ಯಾಚರಣಗೆ ಮುಂದಾಳತ್ವ ವಹಿಸಿ, ಮಾರ್ಗದರ್ಶನ ನೀಡುವ ಮೂಲಕ ಎಲ್ಲಾ ನಕ್ಸಲರನ್ನು ಸೆರೆಂಟರ್​ ಆಗುವಂತೆ ಮಾಡಿದ ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್​​ ನಿಂಬಾಳ್ಕರ್​ ಅವರಿಗೆ ಸಿಎಂ ಸಿದ್ದರಾಮಯ್ಯ ಅವರು ಸ್ವರ್ಣಪದಕ ಪ್ರದಾನ ಮಾಡಿದ್ರು.

ಬೆಂಗಳೂರು ಕೋರಮಂಗಲದ ಕೆಎಸ್‌ಆರ್‌ಪಿ ಮೈದಾನದಲ್ಲಿ ಇಂದು ಬೆಳಗ್ಗೆ ಪೊಲೀಸ್ ಧ್ವಜ ದಿನಾಚರಣೆ ಸಮಾರಂಭದಲ್ಲಿ ಪದಕ ಪ್ರದಾನ ಮಾಡಲಾಯಿತು

1998ರ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಹೇಮಂತ್.ಎಂ.ನಿಂಬಾಳ್ಕರ್ ಅವರು ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

Comments (0)

Your email address will not be published. Required fields are marked *

Back to top button