ಜಿಲ್ಲೆ
ಕೊಪ್ಫಳದಲ್ಲಿ ಪೊಲೀಸ್ ಧ್ವಜ ದಿನಾಚರಣೆ

ಕೊಪ್ಪಳ: ಪೊಲೀಸ್ ಧ್ವಜ ದಿನಾಚರಣೆ ಅಂಗವಾಗಿ, ಕೊಪ್ಪಳದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ, ನಿವೃತ್ತ ಪೊಲೀಸ್ ಅಧಿಕಾರಿ ವಿರೂಪಯ್ಯ, ಮುಖ್ಯ ಅತಿಥಿಗಳಾಗಿ ಪೊಲೀಸ್ ಕವಾಯತಿನ ಗೌರವ ವಂದನೆ ಸ್ವೀಕರಿಸಿದರು. ಕಳೆದ ವರ್ಷ ನಿವೃತ್ತಿ ಹೊಂದಿದ ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಸನ್ಮಾನಿಸಿ ಗೌರವಿಸಲಾಯಿತು. ಈ ಸಮಯದಲ್ಲಿ ಜಿಲ್ಲೆಯ ಎಲ್ಲಾ ಅಧಿಕಾರಿ, ಸಿಬ್ಬಂದಿ ವರ್ಗ ಮತ್ತು ಕುಟುಂಬದ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.




