ಕ್ರೈಂ ಸ್ಟೋರಿ

ಅನ್ವರ್ ಮಾಣಿಪ್ಪಾಡಿಗೆ ಬೆದರಿಕೆ ಕರೆ..!

ಮಂಗಳೂರು: ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿಗೆ ವಿದೇಶಿ ವ್ಯಕ್ತಿಗಳಿಂದ ಜೀವ ಬೇದರಿಕೆ ಕರೆಗಳು ಬರ್ತಿವೆ.

ಕೆಂದ್ರ ಸರ್ಕಾರವು ವಕ್ಫ್ ತಿದ್ದುಪಡಿ ಬಿಲ್​ನ್ನು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮಂಡಿಸಿದ ಬೆನ್ನಲ್ಲೇ ಬೆದರಿಕೆ ಕರೆಗಳು ಬರ್ತಿವೆ. ಈ ಕುರಿತು ಅನ್ವರ್ ಮಾಣಿಪ್ಪಾಡಿ ಅವರು ಮಂಗಳೂರು ನಗರ ಪೋಲಿಸ್​ ಕಮಿಷನರ್​ಗೆ ಮಾಹಿತಿ ನೀಡಿದ್ದಾರೆ. ಇಂಟರ್ನೇಟ್​ ಆಧಾರಿತ ಬೆದರಿಕೆ ಕರೆಗಳು ಬರ್ತಿವೆ ಎಂದು ದೂರಿನಲ್ಲಿ ದಾಖಲಿಸಿದ್ದು, ಈ ಬಗ್ಗೆ ಪೋಲಿಸರು ತನಿಖೆ ನಡೆಸಿದ್ದಾರೆ.

ಇನ್ನು ಲೋಕಸಭೆಯಲ್ಲಿ ವಕ್ಫ್​ ಬಿಲ್​ ಮೇಲೆ ಚರ್ಚೆ ನಡೆಸುವಾಗ ಗೃಹಸಚಿವ ಅಮಿತ್​ ಶಾ ಅವರು, ಅನ್ವರ್​ ಮಾಣಿಪ್ಪಾಡಿ ವರದಿ ಪ್ರಸ್ತಾಪಿಸಿದ್ದರು. ಇದಾದ ಬಳಿಕ ಮಾಣಿಪ್ಪಾಡಿ ಅವರಿಗೆ ಬೆದರಿಕೆ ಕರೆಗಳು ಬರ್ತಿವೆ.

ಇಂಟರ್ನೆಟ್ ಕರೆ ಮೂಲಕ ನನಗೆ ನಿರಂತರ ಬೆದರಿಕೆ ಬರುತ್ತಾ ಇದೆ. ಹಿಂದಿ, ಮರಾಠಿ, ಇಂಗ್ಲೀಷ್ ಹಾಗೂ ಉತ್ತರ ಭಾರತದ ಭಾಷೆಗಳಲ್ಲಿ ಕರೆಗಳು ಬರುತ್ತಾ ಇವೆ. ಇಂಗ್ಲಿಷ್​ನಲ್ಲಿ ಕರೆ ಮಾಡಿದ ವ್ಯಕ್ತಿ ನೀವು ಹೆಚ್ಚು ದಿನ ಉಳಿಯುವುದಿಲ್ಲ ಎಂದು ಬೆದರಿಕೆ ಹಾಕಿದ್ದಾನೆ. ನಿನ್ನ ಸಮುದಾಯ ನಿನ್ನನ್ನು ಬಿಡಲ್ಲ ಎಂದೆಲ್ಲಾ ಹೇಳಿದ್ದಾನೆ. ಆದರೆ ನನ್ನ ಸಮುದಾಯದ ಬಗ್ಗೆ ನನಗೆ ಖುಷಿ ಇದೆ. ಸದ್ಯ ನಾನು ಮಂಗಳೂರು ಕಮಿಷನರ್ ಅನುಪಮ್ ಅಗರವಾಲ್​ಗೆ ಮಾಹಿತಿ ಕೊಟ್ಟಿದ್ದೇನೆ. ನಾನು ಈ ಹಿಂದೆಯೂ ಭದ್ರತೆ ಕೊಟ್ಟಾಗ ವಾಪಾಸ್ ಕಳುಹಿಸಿದ್ದೆ. ಈಗ ತಿದ್ದುಪಡಿ ಮಸೂದೆ ಜಾರಿ ಬಳಿಕ ಮತ್ತೆ ಒಂದಷ್ಟು ಕರೆಗಳು ಬರುತ್ತಿವೆ, ಅದು ಸಾಮಾನ್ಯ ಎಂದಿದ್ದಾರೆ.

ಅನ್ವರ್ ಮಾಣಿಪ್ಪಾಡಿ ಅವರು ಈ ಹಿಂದೆ ರಾಜ್ಯ ವಕ್ಫ್ ಬೋರ್ಡ್​ ಹಗರಣವನ್ನು ಬಯಲಿಗೆಳೆದಿದ್ರು, ಅಲ್ಲದೇ ಪ್ರಭಾವಿ ರಾಜಕಾರಣಗಳು ಸಹ ವಕ್ಪ್ ಆಸ್ತಿಯನ್ನು  ಕಬಳಿಸಿದ್ದಾರೆ ಎಂದು ಆರೋಪಿಸಿದ್ದರು.

Comments (0)

Your email address will not be published. Required fields are marked *

Back to top button