ಕ್ರೈಂ ಸ್ಟೋರಿ

ಸಂತ್ರಸ್ತೆ ಕಿಡ್ನ್ಯಾಪ್​ ಕೇಸ್​​; ಭವಾನಿ ರೇವಣ್ಣಗೆ ‘ಹೈ’ ರಿಲೀಫ್

ಬೆಂಗಳೂರು: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಕೆ.ಆರ್.ನಗರದ ಸಂತ್ರಸ್ತೆಯನ್ನು ಅಪರಹರಿಸಿರುವ ಆರೋಪ ಹೊತ್ತಿರುವ ಹೆಚ್​​ಡಿ ರೇವಣ್ಣ ಪತ್ನಿ ಭವಾನಿಗೆ, ಹಾಸನ ಮತ್ತು ಮೈಸೂರಿಗೆ ತೆರಳಲು ಹೈಕೋರ್ಟ್​ ಷರತ್ತುಬದ್ಧ ಅನುಮತಿ ನೀಡಿದೆ.

ಭವಾನಿ ರೇವಣ್ಣ ಅವರು ಮೈಸೂರು ಮತ್ತು ಹಾಸನ ಜಿಲ್ಲೆ ಪ್ರವೇಶಿಸದಂತೆ ಷರತ್ತು ವಿಧಿಸಲಾಗಿತ್ತು. ಈಗ ಹೈಕೋರ್ಟ್​ ಷರತ್ತನ್ನು ಸಡಿಲಿಸಿದ್ದು, ಹಾಸನ ಮತ್ತು ಮೈಸೂರು ಜಿಲ್ಲೆಗೆ ಪ್ರವೇಶಿಸಬಹುದು ಎಂದಿದೆ. ಆದರೆ, ಸಂತ್ರಸ್ತೆ ಮತ್ತು ಪ್ರಕರಣದ ಸಾಕ್ಷಿಗಳ ಮನೆಯ 500 ಮೀಟರ್ ಸುತ್ತಳತೆ ಪ್ರವೇಶಿಸುವಂತಿಲ್ಲ ಎಂದು ಹೈಕೋರ್ಟ್ ಏಕಸದಸ್ಯ ಪೀಠ ಆದೇಶಿಸಿದೆ.

Comments (0)

Your email address will not be published. Required fields are marked *

Back to top button