ರಾಜಕೀಯ

ವಿನಯ್​ ಆತ್ಮಹತ್ಯೆ ಕೇಸ್​​; ಸಿಬಿಐ ತನಿಖೆಗೆ ಬೊಮ್ಮಾಯಿ ಆಗ್ರಹ

ಹಾವೇರಿ: ಬಿಜೆಪಿ ಕಾರ್ಯಕರ್ತ ವಿನಯ್​ ಸೋಮಯ್ಯ ಆತ್ಮಹತ್ಯೆ ಪ್ರಕರಣವನ್ನು ರಾಜ್ಯ ಪೊಲೀಸರು ನ್ಯಾಯಯುತವಾಗಿ ತನಿಖೆ ಮಾಡ್ತಾರೆ ಅನ್ನೋ ವಿಶ್ವಾಸ ಇಲ್ಲ. ಈ ಕುರಿತು ಸಿಬಿಐ ತನಿಖೆ ಆಗಬೇಕು ಅಂತ ಮಾಜಿ ಸಿಎಂ, ಸಂಸದ ಬಸವರಾಜ್​ ಬೊಮ್ಮಾಯಿ ಹೇಳಿದ್ರು.

ಈ ಬಗ್ಗೆ ಮಾಧ್ಯಮದ ಜೊತೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಹಲವಾರು ಕೇಸ್​ಗಳಿಗೆ ಎಸ್​​ಐಟಿ ಮಾಡಿದ್ದಾರೆ. ಆದ್ರೆ, ಯಾವುದೇ ಪ್ರಕರಣದ ತನಿಖೆ ನ್ಯಾಯಸಮ್ಮತವಾಗಿಲ್ಲ ಮತ್ತು ಪೂರ್ಣಗೊಂಡಿಲ್ಲ. ಹಾಗಾಗಿ ವಿನಯ್​ ಕೇಸ್​​ನ್ನು ಸಿಬಿಐಗೆ ವಹಿಸಿ ಎಂದು ಆಗ್ರಹಿಸಿದ್ರು.

ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಮುರಿದುಬಿದ್ದು ಬಹಳ ದಿನಗಳಾಗಿವೆ. ಹೆಣ್ಣು ಮಕ್ಕಳು ನಿರ್ಭಿತಿಯಿಂದ ಓಡಾಡಲಾಗುತ್ತಿಲ್ಲ. ರಾಜ್ಯದಲ್ಲಿ ಮಂತ್ರಿಗಳನ್ನು ಹನಿಟ್ರ್ಯಾಪ್ ಮಾಡುವಷ್ಟು ದಾರ್ಷ್ಟ್ಯಕ್ಕೆ ಇವತ್ತು ಕಾನೂನು ಸುವ್ಯವಸ್ಥೆ ಕುಸಿದಿದೆ. ಮಂತ್ರಿಗಳನ್ನೇ ಟ್ರ್ಯಾಪ್ ಮಾಡುತ್ತಾರೆ ಅಂದರೆ ಅರ್ಥ ಏನಿದೆ ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿ ರಾಜಕೀಯ ದ್ವೇಷ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದೆ. ಪ್ರತಿಭಟನೆ ಮಾಡಿದರೆ ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಲಾಗುತ್ತದೆ. ಪೊಲೀಸ್ ಸ್ಟೇಷನ್ನಿಗೆ ಕರೆದುಕೊಂಡು ಹೋಗುತ್ತಿದ್ದಾರೆ. ಕೇಸ್ ಹಾಕುತ್ತಿದ್ದಾರೆ. ಇದು ಬಹಳ ದೊಡ್ಡಪ್ರಮಾಣದಲ್ಲಿ ಎಲ್ಲ ಜಿಲ್ಲೆಯಲ್ಲಿ ನಡೆದಿದೆ ಎಂದು ಆರೋಪಿಸಿದರು.

Comments (0)

Your email address will not be published. Required fields are marked *

Back to top button