ರಾಜಕೀಯ

ವಿನಯ್​ ಸೂಸೈಡ್ ಕೇಸ್​​ ಸಿಬಿಐಗೆ ವಹಿಸುವ ಅಗತ್ಯ ಇಲ್ಲ

ಬೆಂಗಳೂರು: ವಿನಯ್ ಸೋಮಯ್ಯ ಆತ್ಮಹತ್ಯೆ ಕೇಸ್ ಸಿಬಿಐಗೆ ವಹಿಸುವ ಅಗತ್ಯ ಇಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಅವರು ಆಗ್ರಹ ಮಾಡುತ್ತಿದ್ದಾರೆ. ಈಗಾಗಲೇ ತನಿಖೆ ನಡೆಯುತ್ತಿದೆ. ಸಿಬಿಐಗೆ ಕೊಡುವ ಅಗತ್ಯ ಏನೂ ಕಾಣಿಸುತ್ತಿಲ್ಲ. ನಮ್ಮ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಏನಾದರೂ ಲೋಪಗಳಾಗಿದ್ದರೆ ಗೊತ್ತಾಗುತ್ತದೆ. ಆಗ ಬೇರೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸ್ಪಷ್ಟನೆ ನೀಡಿದರು.

ಶಾಸಕರ ಹೆಸರನ್ನು ಬಿಜೆಪಿಯವರು  ಹೇಳುತ್ತಿದ್ದಾರೆ. ಎಫ್‌ಐಆರ್‌ನಲ್ಲಿ ಹೆಸರು ಬಿಟ್ಟಿದ್ದಾರೆ. ಡೆತ್‌ನೋಟ್‌ನಲ್ಲಿ ಶಾಸಕರ ಹೆಸರಿದೆ ಅಂತಿದ್ದಾರೆ. ಎಲ್ಲವನ್ನೂ ನೋಡುತ್ತೇವೆ. ಕಾನೂನು ಪ್ರಕಾರ ತನಿಖೆ ಮಾಡುತ್ತೇವೆ ಎಂದರು

Comments (0)

Your email address will not be published. Required fields are marked *

Back to top button