ಕ್ರೈಂ ಸ್ಟೋರಿ

ಭೀಕರ ರಸ್ತೆ ಅಪಘಾತ; ಸ್ಥಳದಲ್ಲೇ ಮೂವರು ಸಾವು

ಹುಬ್ಬಳ್ಳಿ: ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​​ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾದ ಘಟನೆ ನಡೆದಿದೆ.

ನಗರದ ಹೊರವಲಯದ ನೂಲ್ವಿ ಕ್ರಾಸ್​ ಬಳಿ ಈ ಘಟನೆ ನಡೆದಿದ್ದು ಮೃತರನ್ನು ಹುಬ್ಬಳ್ಳಿಯ ಲಿಂಗರಾಜ ನಗರದ ನಿವಾಸಿಗಳು ಎನ್ನಲಾಗಿದೆ. ಕಾರಿನಲ್ಲಿದ್ದ ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೂ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ. ಹುಬ್ಬಳ್ಳಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Comments (0)

Your email address will not be published. Required fields are marked *

Back to top button