ರಾಜ್ಯ

ಪೆಟ್ರೋಲ್​, ಡೀಸೆಲ್​​ ದರ 2ರೂ. ಏರಿಕೆ

ಬೆಂಗಳೂರು: ಕೇಂದ್ರ ಸರ್ಕಾರದಿಂದ ತೈಲದ ಮೇಲೆ ಅಬಕಾರಿ ಶುಲ್ಕ ಹೆಚ್ಚಳ ಮಾಡಲಾಗಿದೆ. ಪ್ರತಿ ಲೀಟರ್​​ಗೆ 2 ರೂಪಾಯಿ ಏರಿಕೆ ಮಾಡಿದ್ದು ಇದು ಜನ ಸಾಮಾನ್ಯರಿಗೆ ಯಾವುದೇ ಬರೆ ಬೀಳಲ್ಲ. ಈ ಅಬಕಾರಿ ತೆರಿಗೆಯನ್ನ ತೈಲ ಕಂಪನಿಗಳ ಮೇಲೆ ಹಾಕಲಾಗಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಣೆ ನೀಡಿದೆ. ಇದರಿಂದ ಜನ ಸಾಮಾನ್ಯರು ಆತಂಕಪಡಬೇಕಿಲ್ಲ ಎಂದು ಹೇಳಲಾಗಿದೆ.

ಪ್ರತಿ ಲೀಟರ್​ಗೆ 2 ರೂಪಾಯಿಯಂತೆ ಪ್ರೆಟ್ರೋಲ್ ಮತ್ತು ಡಿಸೇಲ್ ಬೆಲೆಯಲ್ಲಿ ಏರಿಕೆ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಮೊನ್ನೆ ಮೊನ್ನೆಯಷ್ಟೇ ಕರ್ನಾಟಕ ಸರ್ಕಾರ ಡಿಸೇಲ್ ಮೇಲೆ ಎರಡು ರೂಪಾಯಿ ಹೆಚ್ಚಳ ಮಾಡಿತ್ತು. ಇದೀಗ ಸರ್ಕಾರ ಏಪ್ರಿಲ್ 7 ರಂದು ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ ತಲಾ 2 ರೂಪಾಯಿ ಹೆಚ್ಚಿಸಿದೆ. ಜಾಗತಿಕ ತೈಲ ಬೆಲೆಗಳಲ್ಲಿನ ಏರಿಳಿತಗಳಿಂದ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.

ಸಿಎಂ ಸಿದ್ದರಾಮಯ್ಯ ಸರ್ಕಾರ ಎರಡು ರೂಪಾಯಿ ಡೀಸೆಲ್ ಬೇಲೆ ಏರಿಕೆ ಮಾಡಿತ್ತು. ಈ ದರ ಏರಿಕೆಗೆ ಲಾರಿ ಮಾಲೀಕರ ಸಂಘ ವಿರೋಧ ವ್ಯಕ್ತಪಡಿಸಿದೆ. ದರ ಹೆಚ್ಚಳವನ್ನು ವಿರೋಧಿಸಿ ಲಾರಿ ಮಾಲೀಕರ ಸಂಘ ಇದೇ ಏಪ್ರಿಲ್​ 14 ರಂದು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

Comments (0)

Your email address will not be published. Required fields are marked *

Back to top button