ಕ್ರೈಂ ಸ್ಟೋರಿ

ಹುಬ್ಬಳ್ಳಿಯಲ್ಲಿ ಮತ್ತೇ ಪೊಲೀಸ್ ಗುಂಡಿನ ಸದ್ದು

ಹುಬ್ಬಳ್ಳಿ: ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೌಡಿಶೀಟರ್ ಮಲಿಕ್ ತಾಜುದ್ದೀನ್ ಆದೋನಿ ಮೇಲೆ ಗುಂಡಿನ ದಾಳಿಯನ್ನು ಪೊಲೀಸರು ನಡೆಸಿದ್ದಾರೆ.

ಅಟೋ ಚಾಲಕ ಮಲ್ಲಿಕ್ ತಾಜುವುದ್ದಿನ್ ಆದೋನಿ ಮೇಲೆ ಗುಂಡು ಹಾರಿಸಿದ್ದು, ಕೆಎಂಸಿಆರ್ ಐಗೆ ದಾಖಲಿಸಲಾಗಿದೆ.

ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ಇರ್ಫಾನ್ ಎಂಬಾತನಿಗೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದರು‌.

ಹಳೆ ಹುಬ್ಬಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯ ರಾಘವೇಂದ್ರ ಕಾಲನಿಯ ಸ್ಮಶಾನ ಹತ್ತಿರ ಆರೋಪಿಗಳನ್ನು ಬಂಧಿಸುವ ವೇಳೆ ಪೊಲೀಸ್ ಮೇಲೆ ದಾಳಿ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ತಾಜುದ್ದೀನ್ ಮೇಲೆ ಫೈರಿಂಗ್ ಮಾಡಿದ್ದಾರೆ.

ಈ ವೇಳೆ ಪೊಲೀಸರಿಂದ ಎರಡು ಬಾರಿ ಗಾಳಿಯಲ್ಲಿ ಗುಂಡು ಹಾರಿಸಿ ಬಳಿಕೆ ಮಲೀಕ್ ಬಲಗಾಲಿಗೆ ಗುಂಡು ಹೊಡೆದು ಬಂಧಿಸಲಾಗಿದೆ.
ಘಟನೆಯಲ್ಲಿ ಹಳೆ ಹುಬ್ಬಳ್ಳಿ ಪಿಎಸ್ ಐ ವಿಶ್ವನಾಥ ಆಲದಮಟ್ಟಿ, ಸಿಬ್ಬಂದಿ ಶರೀಫ ನದಾಫ್ ಗಾಯಗೊಂಡಿದ್ದಾರೆ‌.

Comments (0)

Your email address will not be published. Required fields are marked *

Back to top button