Top News

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ..!

ದ್ವಿತೀಯ ಪಿಯುಸಿ ಫಲಿತಾಂಶ ಬಿಡುಗಡೆಯಾದ ನಂತರ, ವಿದ್ಯಾರ್ಥಿಗಳು ಮತ್ತು ಪೋಷಕರು ಕೆಎಸ್ಇಎಬಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶ ಮತ್ತು ಅಂಕಪಟ್ಟಿಯನ್ನು ಪರಿಶೀಲಿಸಬಹುದು. ಮಧ್ಯಾಹ್ನ 1:30ರಿಂದ www.karresults.nic.in ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಿರಲಿದೆ. ಈ ಫಲಿತಾಂಶಕ್ಕೆ ಸಂಬಂಧಿಸಿದ ಲೈವ್ ಅಪ್ಡೇಟ್ಸ್‌ ಇಲ್ಲಿದೆ ನೋಡಿ..

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಸಂಜನಾ ಬಾಯಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.. ಕಲಾ ವಿಭಾಗದಲ್ಲಿ ಬಳ್ಳಾರಿ ಮೂಲದ ಸಂಜನಾ ಬಾಯಿ ರಾಜ್ಯಕ್ಕೆ ಪ್ರಥಮ ಸ್ಥಾನಪಡೆದಿದ್ದಾರೆ.. 600 ಅಂಕಗಳಲ್ಲಿ 597 ಅಂಕ ಪಡೆದಿರುವ ಸಂಜನಾ ಬಾಯಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ..

ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಎಕ್ಸ್ ಪರ್ಟ್ ಕಾಲೇಜಿನ ಅಮೂಲ್ಯ ಕಾಮತ್ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. 599 ಅಂಕಗಳನ್ನು ಅಮೂಲ್ಯ ಕಾಮತ್ ಗಳಿಸಿದ್ದಾರೆ.

ಉಡುಪಿ ಪ್ರಥಮ, ದ.ಕ ದ್ವಿತೀಯ! ಯಾದಗಿರಿಗೆ ಕೊನೆಯ ಸ್ಥಾನ
ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, 93.90 ಶೇಕಡಾ ಫಲಿತಾಂಶ ಪಡೆದು ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡರೆ, ದಕ್ಷಿಣ ಕನ್ನಡ ಜಿಲ್ಲೆ 93.57 ಶೇಕಡಾ ಫಲಿತಾಂಶದ ಮೂಲಕ ರಾಜ್ಯಕ್ಕೆ ಸೆಕೆಂಡ್ ಆಗಿದೆ. ಯಾದಗಿರಿ ಜಿಲ್ಲೆ 48.45 ಶೇಕಡಾ ಫಲಿತಾಂಶದ ಮೂಲಕ ರಾಜ್ಯಕ್ಕೆ ಕೊನೆಯ ಸ್ಥಾನ ಪಡೆದುಕೊಂಡಿದೆ. ಟಾಪ್ 10 ಸ್ಥಾನಗಳಲ್ಲಿ, ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರು ದಕ್ಷಿಣ, ಕೊಡಗು, ಬೆಂಗಳೂರು ಉತ್ತರ, ಉತ್ತರ ಕನ್ನಡ, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ ಕ್ರಮವಾಗಿ ಪಡೆದುಕೊಂಡಿದೆ.

Comments (0)

Your email address will not be published. Required fields are marked *

Back to top button