ಮನರಂಜನೆ

ಹಿರಿಯ ಕಲಾವಿದ ಬ್ಯಾಂಕ್ ಜನಾರ್ಧನ್ ವಿಧಿವಶ…

ಕನ್ನಡ ಚಿತ್ರರಂಗದ ಹಿರಿಯ ಹಾಸ್ಯ ನಟ ಬ್ಯಾಂಕ್‌ ಜನಾರ್ಧನ್‌ (76) ಅವರು ನಿಧನರಾಗಿದ್ದಾರೆ. ಮಧ್ಯರಾತ್ರಿ 2.30ರ ಸುಮಾರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಟ ಬ್ಯಾಂಕ್‌ ಜನಾರ್ಧನ್‌ ಅವರು ಕೊನೆಯುಸಿರೆಳೆದಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ನಟ ಬ್ಯಾಂಕ್‌ ಜನಾರ್ಧನ್‌ ಅವರ ಮನೆ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ನಟ ಬ್ಯಾಂಕ್ ಜನಾರ್ಧನ್ ಅವರು 1948ರಲ್ಲಿ ಚಿತ್ರದುರ್ಗದ ಹೊಳಲ್ಕೆರೆಯಲ್ಲಿ ಜನಿಸಿದರು.ಬ್ಯಾಂಕ್ ಜನಾರ್ದನ್ ಅವರು ಹೊಳಲ್ಕೆರೆಯಲ್ಲೇ ತಮ್ಮ ಬಾಲ್ಯ ಕಳೆದಿದ್ದರು. ಬಳಿಕ ಅಲ್ಲಿಯೇ ಬ್ಯಾಂಕ್‌ನಲ್ಲಿ ಕೆಲಸ ಮಾಡಿಕೊಂಡಿದ್ದರು. ಶಾಲೆ ಹಾಗೂ ಕಾಲೇಜು ದಿನಗಳಲ್ಲೇ ನಾಟಕದ ಗೀಳು ಅಂಟಿಸಿಕೊಂಡಿದ್ದರು. ನಾಟಕಗಳಲ್ಲಿ ಅಭಿನಯ ಮಾಡುತ್ತಾ 1991ರಿಂದ ಸಿನಿಮಾರಂಗದ ಕಡೆ ಮುಖ ಮಾಡಿದ್ದರು. ಬ್ಯಾಂಕ್ ಜನಾರ್ದನ್ ಕನ್ನಡದ ಪ್ರಖ್ಯಾತ ಹಾಸ್ಯನಟರಲ್ಲಿ ಒಬ್ಬರಾಗಿದ್ದಾರೆ.

ಶಂಕರ್‌ನಾಗ್, ಅನಂತ್‌ನಾಗ್, ರವಿಚಂದ್ರನ್, ಜಗ್ಗೇಶ್, ಶಿವರಾಜ್‌ಕುಮಾರ್, ರಾಘವೇಂದ್ರ ರಾಜ್‌ಕುಮಾರ್ ಹೀಗೆ ಘಟಾನುಘಟಿಗಳ ಜೊತೆಗೆ ನಟಿಸಿ ಪ್ರಖ್ಯಾತಿ ಹೊಂದಿದ್ದರು. ನಟ ಬ್ಯಾಂಕ್ ಜನಾರ್ದನ್ ಅಭಿನಯದ ಶ್! ತರ್ಲೆ ನನ್ಮಗ, ಸೂಪರ್ ನನ್ ಮಗ, ಭಂಡ ನನ್ ಗಂಡ ಬಾಕ್ಸ್ ಆಫೀಸ್‌ನಲ್ಲಿ ಧೂಳ್ ಎಬ್ಬಿಸಿತ್ತು.

Comments (0)

Your email address will not be published. Required fields are marked *

Back to top button