ರಾಜಕೀಯಸುದ್ದಿ

ಸೋನಿಯಾ ಗಾಂಧಿ ಹಾಗೂ ರಾಹುಲ್​ ಗಾಂಧಿಗೆ ED ಬಿಗ್​ ಶಾಕ್​..!

ನ್ಯಾಷನಲ್​ ಹೆರಾಲ್ಡ್​ ಪ್ರಕರಣದಲ್ಲಿ ಕಾಂಗ್ರೆಸ್​ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್​ ಗಾಂಧಿಗೆ ಜಾರಿ ನಿರ್ದೇಶನಾಲಯ ನೋಟಿಸ್​ ನೀಡಿದೆ.ನೋಟಿಸ್​ ಬೆನ್ನಲ್ಲೇ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದ್ದು, ರಾಹುಲ್‌ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರಿಗೆ ಸಂಕಷ್ಟ ಶುರುವಾಗಿದೆ. ಗಾಂಧಿ ಪರಿವಾರದ ಮೇಲೆ ಆರೋಪದ ಚಾರ್ಜ್ ಮಾಡಲಾಗಿದೆ.

ನ್ಯಾಷನಲ್‌ ಹೆರಾಲ್ಡ್​ನ ಅಕ್ರಮ ಹಣ ವರ್ಗಾವಣೆ ಕೇಸಲ್ಲಿ ಸೋನಿಯಾ ಗಾಂಧಿ ಎ1 ಆರೋಪಿ ಆಗಿದ್ರೆ.. ರಾಹುಲ್ ಗಾಂಧಿ ಎ2 ಆರೋಪಿ ಅಂತಾ ಚಾರ್ಜ್‌ಶೀಟ್​ನಲ್ಲಿ ಉಲ್ಲೇಖವಾಗಿದೆ. ಇದೇ ಮೊದಲ ಬಾರಿಗೆ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ವಿರುದ್ಧ ಚಾರ್ಜ್‌ ಶೀಟ್‌ ಸಲ್ಲಿಸಲಾಗಿದ್ದು, ರಾಷ್ಟ್ರ ರಾಜಕಾರಣದಲ್ಲಿ ಭಾರೀ ಬಿರುಗಾಳಿಯನ್ನೇ ಸೃಷ್ಟಿಸಿದೆ.ಇವರಿಬ್ಬರ ಜೊತೆಗೆ ಕಾಂಗ್ರೆಸ್​ ನಾಯಕ ಸ್ಯಾಮ್ ಪಿತ್ರೋಡಾ ಹಾಗೂ ಸುಮನ್ ದುಬೆ ಹೆಸರನ್ನೂ ಆರೋಪಿಗಳ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. ಇಡಿ ಚಾರ್ಜ್‌ಶೀಟ್‌ ಬೆನ್ನಲ್ಲೇ ಕಾಂಗ್ರೆಸ್‌ ನಾಯಕರು ಕೇಂದ್ರದ ವಿರುದ್ಧ ಮುಗಿಬಿದ್ದಿದ್ದು, ಇದು ದ್ವೇಷ ರಾಜಕಾರಣವಲ್ಲದೇ ಮತ್ತೇನು ಅಲ್ಲ ಎಂದು ಕಿಡಿಕಾರುತ್ತಿದ್ದಾರೆ.

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣವನ್ನು ದೆಹಲಿಯ ರೋಸ್ ಅವೆನ್ಯೂ ಕೋರ್ಟ್​ ಏಪ್ರಿಲ್ 25 ರಂದು ವಿಚಾರಣೆ ನಡೆಸಲಿದೆ.

Comments (0)

Your email address will not be published. Required fields are marked *

Back to top button