ರಾಜ್ಯಶಿಕ್ಷಣ

1ನೇ ತರಗತಿ ಮಕ್ಕಳ ದಾಖಲಾತಿ ವಯೋಮಿತಿ ಸಡಿಲ : ಮಧು ಬಂಗಾರಪ್ಪ

ಬೆಂಗಳೂರು : 5 ವರ್ಷ 5 ತಿಂಗಳು ತುಂಬಿದ ಮಕ್ಕಳು 1ನೇ ತರಗತಿಗೆ ಸೇರಲು ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ವಯಸ್ಸಿನ ಮಿತಿ ಸಡಿಲಿಕೆ ಬಗ್ಗೆ ಸಚಿವ ಮಧು ಬಂಗಾರಪ್ಪ ತಿಳಿಸಿದರು.

1ನೇ ತರಗತಿ ಪ್ರವೇಶಾತಿಗೆ ವಯೋಮಿತಿ ಸಡಿಲಿಕೆ ಕುರಿತಾಗಿ ಪೋಷಕರು ಗೊಂದಲದಲ್ಲಿ ಇದ್ದಾರೆ. ಎರಡು ತಿಂಗಳು ರಿಯಾಯ್ತಿ ಕೊಡಬಹುದು. ದೇಶದಲ್ಲಿ ಈಗಾಗಲೇ 6 ವರ್ಷ ಇದೆ. ಈ ವರ್ಷ ಮಾತ್ರ ವಯಸ್ಸಿನ ಮಿತಿ ಸಡಿಲ ಮಾಡಲಾಗುವುದು. ಮುಂದಿನ ವರ್ಷದಿಂದ 1ನೇ ತರಗತಿಗೆ 5 ವರ್ಷ 5 ತಿಂಗಳು ತುಂಬಿದ ಮಕ್ಕಳಿಗೆ ಮಾತ್ರ ನೋಂದಣಿ  ನಿಯಮ ಕಡ್ಡಾಯ  ಮಾಡಿದ ಸರ್ಕಾರ. ರಾಜ್ಯ ಶಿಕ್ಷಣ ನೀತಿ ಆಯೋಗದಿಂದ ಇಲಾಖೆಗೆ ಸೂಚನೆ ನೀಡಲಾಗಿದೆ.

ಯುಕೆಜಿ ಮುಗಿಸಿರಬೇಕು. 1ನೇ ತರಗತಿಗೆ 5 ವರ್ಷ 5 ತಿಂಗಳು ದಾಖಲಾತಿ ಮಿತಿ ಸಡಿಲಿಕೆ ಮಾಡಲಾಗಿದೆ. ಇದು ಕೇವಲ ರಾಜ್ಯಪಠ್ಯ ಕ್ರಮಕ್ಕೆ ಮಾತ್ರ ಅನ್ವಯ. ಐಸಿಎಸ್‌ಸಿ, ಸಿಬಿಎಸ್‌ಇ ಬೋರ್ಡ್ ಬಗ್ಗೆ ನಾವು ನಿರ್ಧಾರ ಮಾಡಲು ಆಗೊಲ್ಲ ಎಂದು ಸ್ಪಷ್ಟಪಡಿಸಿದ ಸಚಿವ ಮಧು ಬಂಗಾರಪ್ಪ.

ವಯೋಮಿತಿ ಸಡಿಲ ಮಾಡುವುದಕ್ಕೆ ಎಲ್ಲರೂ ಒತ್ತಡ ಹಾಕಿದ್ದರು. ಮಕ್ಕಳನ್ನ ಮಿಷನ್ ರೀತಿ ಓದಿಸೋಕೆ ಪೋಷಕರು ಮುಂದಾಗಬಾರದು. ಮಕ್ಕಳಿಗೆ ಒತ್ತಡ ಹಾಕುವುದು ಸರಿಯಲ್ಲ. ಒತ್ತಡ ಇಲ್ಲದೆ ಮಕ್ಕಳು ಓದಬೇಕು ಎಂದು ಸಲಹೆ ನೀಡಿದರು.

Comments (0)

Your email address will not be published. Required fields are marked *

Back to top button