ಮಂಗಳೂರು : ಹಿಂದೂಗಳಿಗೆ ಮತಾಂತರ ಮಾಡುವಂತೆ ಕರೆ ಕೊಟ್ಟ ಚಕ್ರವರ್ತಿ ಸೂಲಿಬೆಲೆ.ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ರಾಮೋತ್ಸವ ಕಾರ್ಯಕ್ರಮದಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಬಹಿರಂಗ ಹೇಳಿಕೆ..
ಜನಸಂಖ್ಯೆ ಜಾಸ್ತಿಯಾಗಲು ನಮ್ಮ ಜನ ಎರಡು – ಮೂರು ಮಕ್ಕಳನ್ನ ಮಾಡ್ತಾರೇನ್ರೀ..? ನಮ್ಮ ಜನರಿಗೆ ಅವರ ಮಕ್ಕಳನ್ನು ಪಂಚರ್ ಹಾಕಲು ಕಳುಹಿಸಲು ಇಷ್ಟವಿಲ್ಲ.ಅವರಿಗೆ ನಮ್ಮ ಮಕ್ಕಳು ಚೆನ್ನಾಗಿ ಓದಿ ಡಾಕ್ಟರ್,ಇಂಜಿನಿಯರ್ ಆಗಬೇಕು ಅಷ್ಟೇ. ಓದಿಸೋ ಕೆಪಾಸಿಟಿ ಇಲ್ಲದ ಕಾರಣ ಒಂದು ಸಾಕು, ಎರಡು ಸಾಕು ಅಂತಾರೆ ನಮ್ಮ ಜನ.
ಸರ್ಕಾರದ ಕಾನೂನು ಬಳಸಿಕೊಳ್ಳಿ:
ಸರ್ಕಾರ ನಮಗಾಗಿ ಮಾಡಿರೋ ಕಾನೂನುಗಳನ್ನು ಬಳಸಿಕೊಳ್ಳಿ.ಹಾಗಾಗಿ ಪೊಲೀಸರಿಗೂ ಹೇಳ್ತಾ ಇದೀನಿ,ಇದು ಸರ್ಕಾರ ಕೊಟ್ಟಿರೋ ಕಾನೂನು,ನಮ್ಮದಲ್ಲ.
ಹಿಂದಿನ ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ಮಾಡಿತ್ತು.ಹೊಸ ಸರ್ಕಾರ ಬಂದು ಆ ಕಾನೂನು ತೆಗೆದು ಹಾಕಿತು.ಅಂದರೆ ಅದರ ಅರ್ಥ ನೀವು ಮತಾಂತರ ಮಾಡಬಹುದು ಅಂತ. ಸರ್ಕಾರವೇ ಧೈರ್ಯವಾಗಿ ಹೇಳಿದೆ, ಮತಾಂತರ ಮಾಡಿ ಅಂತ, ಹಾಗಿದ್ದಾಗ ನಾವು ಮಾಡಬೇಕಲ್ವಾ..? ಜಗತ್ತಿನ ಯಾವ ರಾಷ್ಟ್ರದಲ್ಲೂ ಈ ರೀತಿಯ ಪರಿಸ್ಥಿತಿ ಇಲ್ಲ. ಹಾಗಾಗಿ ಮತಾಂತರ ಮಾಡಿ, ಸರ್ಕಾರವೇ ಅಧಿಕೃತವಾಗಿ ಹೇಳಿದೆ..ಮಾಡಲು ನಿಮಗೆ ಕಷ್ಟವೇನು..?
ನಾನು ಜಗತ್ತಿನ ಅತ್ಯಂತ ಶ್ರೇಷ್ಠ ಧರ್ಮವಾದ ಹಿಂದೂ ಧರ್ಮಕ್ಕೆ ಸೇರಿದವನು.ಜಗತ್ತಿನಲ್ಲಿ ಅನೇಕ ಮತ ಪಂಥಗಳಿವೆ,ಆದರೆ ಅವರಿಗೆಲ್ಲಾ ಒಬ್ಬನೇ ದೇವರು.ಒಬ್ಬ ದೇವರಿಗೆ ಸಮಸ್ಯೆಯಾದ್ರೆ ಆ ಧರ್ಮವೇ ಹೋಯಿತು,ಆದರೆ ನಮಗೆ 33 ಕೋಟಿ ದೇವತೆಗಳು ಇದ್ದಾರೆ.
ನೀವು ರಾಮನನ್ನ ಬೈದರೆ ನಾನು ಸೀತೆಯನ್ನ ಹಿಡಿದುಕೊಳ್ತೀನಿ.ನೀವು ಸೀತೆಗೆ ಕಳಂಕ ತರೋ ಪ್ರಯತ್ನ ಪಟ್ಟರೆ ಶ್ರೀಕೃಷ್ಣ ಇದಾನೆ..ಕೃಷ್ಣನಿಗೆ ಕಳಂಕ ತರೋ ಪ್ರಯತ್ನ ಪಟ್ಟರೆ ನಮಗೆ ಮಂಜುನಾಥ ಸ್ವಾಮಿ ಇದಾನೆ..ನೀವು ಮಂಜುನಾಥನಿಗೆ ಕಳಂಕ ತರೋ ಪ್ರಯತ್ನ ಪಟ್ಟರೆ ನನಗೆ ಊರಲ್ಲೊಂದು ದೇವಸ್ಥಾನ ಇದೆ, ಎಲ್ಲಿ ಬೇಕಾದರೂ ಹೋಗ್ತೀನಿ. ಹಾಗಾಗಿ ಅವರಿಗೆ ಹೇಳಿ,ಒಂದೇ ದೇವರು ಒಳ್ಳೆಯದೋ ಅಥವಾ 33 ಕೋಟಿ ದೇವರು ಒಳ್ಳೆಯದೋ ಅಂಥ..?
ಮಿತ್ರರೇ ಅವರು ಬಂದು ಹೇಳ್ತಾರೆ, ನಮ್ಮದೊಂದೇ ಪುಸ್ತಕ ನಿಮ್ಮತ್ರ ಬಹಳ ಪುಸ್ತಕಗಳು ಇವೆ ಅಂತ,ಆಗ ನೀವು ಹೇಳಿ,ನಮ್ಮತ್ರ ಲೈಬ್ರಿರಿ ಇದೆ,ಯಾವುದೋ ಒಂದು ಪುಸ್ತಕ ಸುಡೋದ್ರಿಂದ ಹಿಂದೂ ಧರ್ಮ ಸಾಯೋಲ್ಲ.
ನಿಮ್ಮ ಮತ-ಪಂಥಗಳಲ್ಲಿ ಹೆಣ್ಮಕ್ಕಳಿಗೆ ಗೌರವ ಇಲ್ಲ ಅಂತ ಅವರಿಗೆ ಹೇಳಿ.ಇಲ್ಲಿರೋ ಹೆಣ್ಮಕ್ಕಳಿಗೆ ಮುಖ ಮುಚ್ಚಿಕೊಳ್ಳಿ ಅಂತ ಹೇಳಿಲ್ಲ, ಗಂಡು ಮಕ್ಕಳ ಪಕ್ಕದಲ್ಲಿ ಕೂರಬೇಡಿ ಅಂತ ಹೇಳಿಲ್ಲ,ಬರೋರಿಗೆ ಬನ್ನಿ ಅಂತ ಹೇಳಿ, ಬರುವವರನ್ನು ಮುಕ್ತ ಕಂಠದಿಂದ ಸ್ವಾಗತಿಸಿ ಎಂದ ಚಕ್ರವರ್ತಿ ಸೂಲಿಬೆಲೆ.
ಸಂಖ್ಯೆ ವೃದ್ದಿಸಲು ಮಕ್ಕಳೇ ಆಗಬೇಕೆಂದಿಲ್ಲ, ನಮ್ಮ ಹೃದಯ ಸ್ವಲ್ಪ ವಿಶಾಲ ಆಗಬೇಕಿದೆ. ಸೇವೆ ಮಾಡೋದು ನಿಮ್ಮ ಸಮಾಜ ಮಾತ್ರ ಅಲ್ಲ, ನಮ್ಮ ಸಮಾಜ ಮಾಡೋ ಸೇವೆ ಯಾವ ಧರ್ಮ ಮಾಡಿದೆ ಎಂದು ಪ್ರಶ್ನೆ ಹಾಕಿದ ಚಿಂತಕ ಚಕ್ರವರ್ತಿ ಸೂಲಿಬೆಲೆ..
ಇಂಥ ಸೇವೆ ಮಾಡೋ ಸಮಾಜ ಮತ್ತೊಂದಿಲ್ಲ ಅಂತ ಹೇಳಿ ನಮ್ಮ ಸಮಾಜಕ್ಕೆ ಕರೆ ತನ್ನಿ ಎಂದು ಬಹಿರಂಗ ಹೇಳಿಕೆ ನೀಡಿದ್ದಾರೆ ಸೂಲಿಬೆಲೆ.ನಮ್ಮ ಸಮಾಜದ ಎಲ್ಲಾ ಪ್ರಮುಖರು ಈ ಬಗ್ಗೆ ಒಂದು ಘೋಷಣೆ ಹೊರಡಿಸಿ.ಯಾರಾದರೂ ನಮಗೆ ಮತಾಂತರ ಆಗಬೇಕು ಅಂದರೆ ನಮ್ಮ ಸಮಾಜ ಅವರನ್ನ ಪ್ರೀತಿಯಿಂದ ಸ್ವಾಗತಿಸುತ್ತೆ ಬನ್ನಿ ಅಂತ ಕರೀರಿ,ಸಮಾಜದ ಸ್ವಾಮೀಜಿಗಳ ಮೂಲಕ ಘೋಷಣೆ ಕೊಡಲಿ, ಯಾರಾದ್ರೂ ಬರ್ತೀರಾ ಅಂತಾದರೆ ಜಾತಿ ಕೇಳದೇ ಕರೆಯಿರಿ.ನೀವು ಒಂದು ಸಲ ಮುಕ್ತ ಕಂಠದಿಂದ ಕರೀರಿ, ಎಷ್ಟು ಜನ ಸೈಲೆಂಟಾಗಿ ಸೇರಿಕೊಳ್ತಾರೆ ನೋಡಿ.
ಜನಸಂಖ್ಯೆ ಜಾಸ್ತಿ ಮಾಡಲು ಸರ್ಕಾರವೇ ಕೊಟ್ಟ ಇಂಥ ಕಾನೂನುಗಳು ನಮ್ಮಲ್ಲಿವೆ ಹಾಗಾಗಿ ಸಂಖ್ಯೆ ವಿಸ್ತರಿಸಲು ಈ ರೀತಿಯಲ್ಲಿ ನಾವು ಕೆಲಸ ಮಾಡಬೇಕಿದೆ. ಮುಂದಿನ ಪೀಳಿಗೆಗೆ ಭಾರತ ಬಿಟ್ಟು ಕೊಟ್ಟು ಹೋಗುವಾಗ ಅದಕ್ಕೆ ಸ್ವಲ್ಪ ಪಾಕಿಸ್ತಾನ, ಬಾಂಗ್ಲಾದೇಶ, ಅಗತ್ಯ ಬಿದ್ದರೆ ನೇಪಾಳವನ್ನೂ ಸೇರಿಸೋಣ ಎಂದು ಉಜಿರೆಯ ರಾಮೋತ್ಸವದಲ್ಲಿ ಚಕ್ರವರ್ತಿ ಸೂಲಿಬೆಲೆ ದಿಕ್ಸೂಚಿ ಭಾಷಣದಲ್ಲಿ ಹೇಳಿಕೆ ನೀಡಿದ್ದಾರೆ..