ಮನರಂಜನೆ

ಟಾಲಿವುಟ್​ ಸ್ಟಾರ್ ನಟ ಮಹೇಶ್​ ಬಾಬುಗೆ ED ಶಾಕ್​..!

ಟಾಲಿವುಡ್ ಸೂಪರ್‌ಸ್ಟಾರ್ ಮಹೇಶ್ ಬಾಬು  ಅವರಿಗೆ ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿದೆ. ಸುರಾನ ಗ್ರೂಪ್ ಮತ್ತು ಸಾಯಿ ಸೂರ್ಯ ಡೆವಲಪರ್ಸ್‌ನ ಪ್ರಚಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಆರೋಪದ ಮೇಲೆ ನೋಟಿಸ್‌ಗಳನ್ನು ನೀಡಲಾಗಿದೆ. ಈ ತಿಂಗಳ 27 ರಂದು ವಿಚಾರಣೆಗೆ ಹಾಜರಾಗುವಂತೆ ಮಹೇಶ್ ಬಾಬುಗೆ ಇಡಿ ಅಧಿಕಾರಿಗಳು ಆದೇಶಿಸಿದ್ದಾರೆ.

ಪ್ರಮೋಷನ್ ಅಡಿಯಲ್ಲಿ ಮಹೇಶ್ ಬಾಬು ಸುರಾನ್​ ಗ್ರೂಪ್ ಮತ್ತು ಸಾಯಿಸೂರ್ಯ ಡೆವಲಪರ್ಸ್​ನಿಂದ ಐದು ಕೋಟಿಗೂ ಹೆಚ್ಚು ಹಣ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಏಪ್ರಿಲ್ 16 ರಂದು ಸುರಾನ್​ ಗ್ರೂಪ್ ಮತ್ತು ಸಾಯಿಸೂರ್ಯ ಡೆವಲಪರ್ಸ್ ಮೇಲೆ ಇಡಿ ದಾಳಿ ಮಾಡಿತ್ತು. ಕಂಪನಿಗಳ ಕಚೇರಿ ಹಾಗೂ ಮುಖ್ಯಸ್ಥರ ನಿವಾಸದ ಮೇಲೆ ದಾಳಿ ನಡೆಸಿತ್ತು. ಅದಾದ ನಂತರ ಈ ಬೆಳವಣಿಗೆ ನಡೆದಿದೆ.

ಅಧಿಕಾರಿಗಳು ಮಹೇಶ್​ ಬಾಬುಗೆ ಏಪ್ರಿಲ್ 28 ರಂದು ಹೈದರಾಬಾದ್‌ನಲ್ಲಿರುವ ಇಡಿ ಕಚೇರಿಗೆ ಬರುವಂತೆ ನೋಟಿಸ್ ಜಾರಿ ಮಾಡಿದ್ದಾರೆ. ಈ ಜಾಹೀರಾತಿಗಾಗಿ ಮಹೇಶ್ ಬಾಬು ಒಟ್ಟು 5.9 ಲಕ್ಷ ರೂಪಾಯಿ ಪಡೆದಿದ್ದಾರೆ ಎನ್ನಲಾಗಿದೆ. ಅದರಲ್ಲಿ ಮಹೇಶ್ ಬಾಬು 3.4 ಕೋಟಿ ರೂಪಾಯಿ ಚೆಕ್ ಮತ್ತು 2.5 ಕೋಟಿ ರೂಪಾಯಿ ನಗದು ಪಡೆದಿರುವುದು ಪತ್ತೆಯಾಗಿದೆ.

ಸಾಯಿ ಸೂರ್ಯ ಡೆವಲಪರ್ ಎಂಡಿ ಸತೀಶ್ ಚಂದ್ರ ಮನೆಯಲ್ಲಿ ದೊರೆತ ದಾಖಲೆಯ ಆಧಾರದ ಮೇಲೆ ಪ್ರಕರಣ ಬೆಳಕಿಗೆ ಬಂದಿದೆ. ಮಹೇಶ್ ಬಾಬು ತಮ್ಮ ಪತ್ನಿ ಮತ್ತು ಮಕ್ಕಳೊಂದಿಗೆ ಸಾಯಿಸೂರ್ಯ ಡೆವಲಪರ್ಸ್ ಜಾಹೀರಾತಿನಲ್ಲಿ ನಟಿಸಿದ್ದರು.

Comments (0)

Your email address will not be published. Required fields are marked *

Back to top button