ರಾಜ್ಯ

ನ್ಯಾಯಮೂರ್ತಿಗಳ ವರ್ಗಾವಣೆ ವಿರೋಧಿಸಿ ಪ್ರತಿಭಟನೆ..

ಬೆಂಗಳೂರು : ಕರ್ನಾಟಕ ಹೈಕೋರ್ಟ್​ನ ನಾಲ್ವರು ನ್ಯಾಯಮೂರ್ತಿಗಳ ವರ್ಗಾವಣೆ ಖಂಡಿಸಿ ಇಂದು ಬೆಂಗಳೂರು ವಕೀಲರ ಸಂಘದಿಂದ ಹೈಕೋರ್ಟ್​ ಮುಂದೆ ಪ್ರತಿಭಟನೆ ಮಾಡುತ್ತಿದ್ದಾರೆ.

ನಾಲ್ವರು ನ್ಯಾಮೂರ್ತಿಗಳಾದ ನ್ಯಾ. ಕೃಷ್ಣ ದೀಕ್ಷಿತ್, ನ್ಯಾ. ಸಂಜಯ್ ಗೌಡ, ನ್ಯಾ. ನಟರಾಜನ್, ನ್ಯಾ. ಹೇಮಂತ್ ಚಂದನ್ ಗೌಡರ್ ವರ್ಗಾವಣೆ ವಿರೋಧಿಸಿ ಹೈಕೋರ್ಟ್​ ಪದಾಂಕಿತ ಹಿರಿಯ ಹಾಗೂ ಎಲ್ಲ ವಕೀಲರು ಕೋರ್ಟ್​ ಮುಂದೆ ಪ್ರತಿಭಟನೆ ಆರಂಭಿಸಿದ್ದಾರೆ.

ನ್ಯಾಯಮೂರ್ತಿಗಳ ವರ್ಗಾವಣೆ ಖಂಡಿಸಿ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲು ಮಧ್ಯಾಹ್ನ 1:30ಕ್ಕೆ ಬೆಂಗಳೂರು ವಕೀಲರ ಸಂಘದಿಂದ ಸಾಮಾನ್ಯ ಸಭೆಯನ್ನು ಕರೆಯಲಾಗಿದೆ.

Comments (0)

Your email address will not be published. Required fields are marked *

Back to top button