ರಾಜ್ಯ

ಇಸ್ರೋ ಮಾಜಿ ಅಧ್ಯಕ್ಷ ಕೆ.ಕಸ್ತೂರಿ ರಂಗನ್​ ವಿಧಿವಶ..!

ಬೆಂಗಳೂರು : ಇಸ್ರೋದ ಮಾಜಿ ಅಧ್ಯಕ್ಷ ಹಾಗೂ ಹೊಸ ಶಿಕ್ಷಣ ನೀತಿಯ ಕರಡು ಸಮಿತಿಯ ಅಧ್ಯಕ್ಷರಾಗಿದ್ದಕೆ.ಕಸ್ತೂರಿರಂಗನ್ ಅವರು ವಿಧಿವಶರಾಗಿದ್ದಾರೆ. ರಂಗನ್ ಅವರಿಗೆ 84 ವರ್ಷ ವಯಸ್ಸಾಗಿದ್ದು, ಬೆಂಗಳೂರಿನ ಕೊಡಿಗೇನಹಳ್ಳಿ ನಿವಾಸದಲ್ಲಿ ನೆಲೆಸಿದ್ದರು.

‘ಕಸ್ತೂರಿರಂಗನ್ ಅವರು ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿರುವ ತಮ್ಮ ನಿವಾಸದಲ್ಲಿ ವಿಧಿವಶರಾಗಿದ್ದಾರೆ. ಏಪ್ರಿಲ್ 27ರಂದು ರಾಮನ್ ಸಂಶೋಧನಾ ಸಂಸ್ಥೆಯಲ್ಲಿಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು’ ಎಂದು ಅಧಿಕಾರಿಗಳು ಮಾಹಿತಿ ತಿಳಿಸಿದ್ದಾರೆ.

ಕಸ್ತೂರಿರಂಗನ್ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕುಲಪತಿ ಮತ್ತು ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಕಸ್ತೂರಿ ರಂಗನ್​ ಅವರು 2003-09ರ ವರೆಗೆ ರಾಜ್ಯಸಭೆಯ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ.ಭಾರತದ ಯೋಜನಾ ಆಯೋಗದ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಕಸ್ತೂರಿರಂಗನ್ 2004ರ ಏಪ್ರಿಲ್ ನಿಂದ 2009 ರವರೆಗೆ ಬೆಂಗಳೂರಿನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅಡ್ವಾನ್ಸಡ್‌ ಸ್ಟಡೀಸ್ ಸಂಸ್ಥೆಯ ನಿರ್ದೇಶಕರಾಗಿದ್ದರು.

ಕಸ್ತೂರಿ ರಂಗನ್ ಅವರ ಸಾಧನೆಯನ್ನು ಗುರುತಿಸಿದ್ದ ಭಾರತ ಸರ್ಕಾರ ಪದ್ಮವಿಭೂಷಣ, ಪದ್ಮಭೂಷಣ, ಪದ್ಮಶ್ರೀ ನೀಡಿ ಗೌರವಿಸಿದೆ.

Comments (0)

Your email address will not be published. Required fields are marked *

Back to top button