Top Newsದೇಶ/ವಿದೇಶ

ಕಣಿವೆ ನಾಡಿಂದ ರಾಹುಲ್​ ಗಾಂಧಿ ಸಂದೇಶ

ನಾವೆಲ್ಲ ಭಾರತೀಯರು.. ಒಗ್ಗಟ್ಟಾಗಿರಬೇಕು.ಭಯೋತ್ಪಾದಕರ ಕೃತ್ಯವನ್ನು ಮೆಟ್ಟಿ ನಿಲ್ಲಬೇಕು ಎಂದು  ಲೋಕಸಭೆ ವಿಪಕ್ಹೇಷ ನಾಯಕ ರಾಹುಲ್ ಗಾಂಧಿ ಕರೆ ನೀಡಿದ್ದಾರೆ. ಭೀಕರ ಭಯೋತ್ಪಾದಕ ದಾಳಿಗೆ ಸಾಕ್ಷಿಯಾದ ಪಹಲ್ಗಾಮ್​ಗೆ ಭೇಟಿ ನೀಡಿ ಅವರು ಮಾತನಾಡಿದರು.

ಇದೊಂದು ಭಯಾನಕ ದುರಂತ ಮತ್ತು ಏನು ನಡೆಯುತ್ತಿದೆ ಎಂಬುದನ್ನು ಅರ್ಥಮಾಡಿಕೊಳ್ಳಲು ಮತ್ತು ಸಹಾಯ ಮಾಡಲು ನಾನು ಇಲ್ಲಿಗೆ ಬಂದಿದ್ದೇನೆ. ಜಮ್ಮು ಮತ್ತು ಕಾಶ್ಮೀರದ ಇಡೀ ಜನರು ಈ ಭಯಾನಕ ಕೃತ್ಯವನ್ನು ಖಂಡಿಸಿದ್ದಾರೆ. ಅವರು ರಾಷ್ಟ್ರವನ್ನು ಸಂಪೂರ್ಣವಾಗಿ ಬೆಂಬಲಿಸಿದ್ದಾರೆ ಎಂದು ರಾಹುಲ್​ ಗಾಂಧಿ ಹೇಳಿದರು.

ನಾನು ಗಾಯಾಳುಗಳಲ್ಲಿ ಒಬ್ಬರನ್ನು ಭೇಟಿಯಾದೆ, ಉಳಿದವರನ್ನು ಭೇಟಿಯಾಗಲು ಸಾಧ್ಯವಾಗಲಿಲ್ಲ. ಏಕೆಂದರೆ, ಅವರು ಮನೆಗಳಿಗೆ ಹಿಂತಿರುಗಿದ್ದಾರೆ. ಕುಟುಂಬ ಸದಸ್ಯರನ್ನು ಕಳೆದುಕೊಂಡ ಎಲ್ಲರೊಂದಿಗೂ ನನ್ನ ಪ್ರೀತಿ ಮತ್ತು ವಾತ್ಸಲ್ಯ ಇರುತ್ತದೆ. ಇಡೀ ರಾಷ್ಟ್ರವು ಒಂದಾಗಿ ನಿಂತಿದೆ ಎಂದು ಎಲ್ಲರೂ ತಿಳಿದುಕೊಳ್ಳಬೇಕೆಂದು ನಾನು ಬಯಸುತ್ತೇನೆ ಎಂದು ರಾಹುಲ್ ಗಾಂಧಿ ತಿಳಿಸಿದರು.

Comments (0)

Your email address will not be published. Required fields are marked *

Back to top button