Thursday, May 1, 2025
32 C
Bengaluru
LIVE
ಮನೆರಾಜ್ಯಬಸ್​ ನಿಲ್ಲಿಸಿ ನಮಾಜ್​ : NWKRTC ಗೆ ತನಿಖೆ ನಡೆಸುವಂತೆ ನೋಟಿಸ್​

ಬಸ್​ ನಿಲ್ಲಿಸಿ ನಮಾಜ್​ : NWKRTC ಗೆ ತನಿಖೆ ನಡೆಸುವಂತೆ ನೋಟಿಸ್​

ಹುಬ್ಬಳ್ಳಿ-ಹಾವೇರಿ : ಪ್ರಯಾಣಿಕರು ಇರುವ ಸರ್ಕಾರಿ ಬಸ್ ಅನ್ನು ಮಾರ್ಗ ಮಧ್ಯೆ ನಿಲ್ಲಿಸಿ ಬಸ್​ನಲ್ಲೇ ಚಾಲಕ ಕಂ.ನಿರ್ವಾಹಕ  ನಮಾಜ್ ಮಾಡುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವೈರಲ್ ಆಗುತ್ತಿದ್ದ ಬೆನ್ನಲ್ಲೇ ಸಾರಿಗೆ ಸಚಿವರಿಂದ ನೋಟಿಸ್​ ಜಾರಿಯಾಗಿದೆ.

ಏ.29ರಂದು ಸಂಜೆ ಹುಬ್ಬಳ್ಳಿಯಿಂದ ಹಾವೇರಿಗೆ ಕಾರ್ಯಾಚರಣೆಯಾಗುತ್ತಿದ್ದ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಚಾಲಕ-ಕಂ-ನಿರ್ವಾಹಕ ಮಾರ್ಗ ಮಧ್ಯೆ ಬಸ್ ನಿಲ್ಲಿಸಿ ನಮಾಜ್ ಮಾಡಿರುವ ಬಗ್ಗೆ ಪ್ರಯಾಣಿಕರೊಬ್ಬರು ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.ಈ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದ್ದು, ಚಾಲಕನ ನಡೆಗೆ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಚಾಲಕನ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ನೆಟ್ಟಿಗರು ಆಗ್ರಹಿಸುತ್ತಿದ್ದಾರೆ.

ತನಿಖೆಗೆ ಆದೇಶ

ಚಾಲಕ ನಮಾಜ್ ಮಾಡುತ್ತಿರುವ ವಿಡಿಯೋ ವೈರಲ್ ಆಗುತ್ತಲೇ ಪ್ರಕರಣದ ತನಿಖೆ ನಡೆಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಂಗ ಎಂ.ಅವರಿಗೆ ಸೂಚನೆ ನೀಡಿದ್ದಾರೆ. ತನಿಖೆ ನಡೆಸಿ ತಪ್ಪು ಕಂಡುಬಂದರೆ ಚಾಲಕನ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಿ.ಮುಂದೆ ಈ ರೀತಿಯ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸುವಂತೆ ಪತ್ರ ಬರೆದಿದ್ದಾರೆ.

ಸರ್ಕಾರಿ ಸೇವೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ಕೆಲವೊಂದು ನೀತಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕಾಗಿರುತ್ತದೆ. ಪ್ರತಿಯೊಬ್ಬ ವ್ಯಕ್ತಿಗೂ ಧಾರ್ಮಿಕ ಸ್ವಾತಂತ್ರ್ಯದ‌ ಹಕ್ಕಿದ್ದರೂ ಸಹ ಸಾರ್ವಜನಿಕ ಸೇವೆಯಲ್ಲಿರುವವರು, ಕರ್ತವ್ಯದ ವೇಳೆ ಹೊರತುಪಡಿಸಿ ತಮ್ಮ ತಮ್ಮ ಧರ್ಮವನ್ನು ಪಾಲಿಸಬಹುದಾಗಿರುತ್ತದೆ. ಆದರೆ, ಕರ್ತವ್ಯದ ಸಮಯದಲ್ಲಿ ಮಾರ್ಗ ಮಧ್ಯದಲ್ಲಿ ಬಸ್ ಅನ್ನು ನಿಲ್ಲಿಸಿ, ಬಸ್​ನಲ್ಲಿ ಪ್ರಯಾಣಿಕರು‌ ಇದ್ದಾಗ್ಯೂ ಸಹ ನಮಾಜ್ ಮಾಡಿರುವುದು ಆಕ್ಷೇಪಾರ್ಹ. ಈ ವಿಡಿಯೋ ಬಗ್ಗೆ ಕೂಡಲೇ ತನಿಖೆ ನಡೆಸಿ, ಸಂಬಂಧಪಟ್ಟ ಸಿಬ್ಬಂದಿಯು ತಪ್ಪಿತಸ್ಥರೆಂದು ಕಂಡುಬಂದಲ್ಲಿ, ಸೂಕ್ತ ಶಿಸ್ತಿನ‌ ಕ್ರಮ ಜರುಗಿಸಿ. ಇನ್ನು ಮುಂದೆ ಈ ರೀತಿಯ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಿ ಎಂದು ಸೂಚನೆ ನೀಡಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments