#Exclusive NewsTop Newsರಾಜಕೀಯ

ಸಚಿವ ಶಿವಾನಂದ ಪಾಟೀಲ್ ಶಾಸಕ ಸ್ಥಾನಕ್ಕೆ​ ರಾಜೀನಾಮೆ..!

ಬಿಜೆಪಿ ಉಚ್ಚಾಟಿತ ಶಾಸಕ ಬಸವನಗೌಡ ಪಾಟೀಲ್ ಸವಾಲ್ ಸ್ವೀಕರಿಸಿದ ಸಚಿವ ಶಿವಾನಂದ ಪಾಟೀಲ್​ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸ್ಪೀಕರ್ ಯುಟಿ ಖಾದರ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ನೀಡಿ, ನನ್ನ ರಾಜೀನಾಮೆ ಪತ್ರವನ್ನು ಅಂಗೀಕರಿಸಿ ಎಂದು ಮನವಿ ಮಾಡಿದ್ದಾರೆ.

ಶಿವಾನಂದ ಪಾಟೀಲ್​ ರಾಜೀನಾಮೆ ಪತ್ರದಲ್ಲಿ ಏನಿದೆ..?

ವಿಜಯಪುರ ನಗರ ಶಾಸಕರಾದ ಶ್ರೀ ಬಸನಗೌಡ ಆರ್. ಪಾಟೀಲ ಅವರು ತಮ್ಮ ವಿಜಯಪುರ ಮತಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ. ನನ್ನ ವಿರುದ್ಧ ಬಸವನ ಬಾಗೇವಾಡಿ ಮತಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಸವಾಲು ಹಾಕಿದ್ದಾರೆ. ನಾನು ಅವರ ಸವಾಲನ್ನು ಸ್ವೀಕರಿಸಿ, ಅವರ ವಿರುದ್ಧ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಹಾಗಾಗಿ ನಾನು ಪ್ರತಿನಿಧಿಸುತ್ತಿರುವ ಬಸವನ ಬಾಗೇವಾಡಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ಆದುದರಿಂದ. ಶ್ರೀ ಬಸನಗೌಡ ಆರ್. ಪಾಟೀಲ್ ಅವರು ಸವಾಲು ಹಾಕಿರುವಂತೆ ಅವರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ಅವರ ರಾಜೀನಾಮೆ ಅಂಗೀಕಾರವಾದರೆ ಮಾತ್ರ ದಯಮಾಡಿ ನನ್ನ ರಾಜೀನಾಮೆಯನ್ನೂ ಅಂಗೀಕರಿಸುವಂತೆ ತಮ್ಮಲ್ಲಿ ಕೋರುತ್ತೇನೆ ಎಂದು ಸ್ಪೀಕರ್​ ಯು.ಟಿ.ಖಾದರ್​ ಅವರಿಗೆ ರಾಜೀನಾಮೆ ಪತ್ರವನ್ನು ಬರೆದಿದ್ದಾರೆ..

Comments (0)

Your email address will not be published. Required fields are marked *

Back to top button