Top Newsರಾಜಕೀಯ

ಸುಪಾರಿಗೆ ಪರಿಹಾರ ಹಣ – ನಂಗೊತ್ತಿಲ್ಲ ಅಂದ್ರು ಸಿಎಂ

ಹಾನಗಲ್ – ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ಹಾಗೂ ಪತ್ತೆ ಹಚ್ಚಲು ಒಂದು ವಿಶೇಷ ಪಡೆಯ ಅಗತ್ಯವಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.  ಕರಾವಳಿಯಲ್ಲಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚಿಸಲು ಸರ್ಕಾರ ಮುಂದಾಗಿರುವ ಬಗ್ಗೆ ಮಾತನಾಡಿದ ಅವರು ಗೃಹ ಸಚಿವರೊಂದಿಗೆ ಮಾತನಾಡಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಮಂಗಳೂರಿನಲ್ಲಿ ಫಾಜಿಲ್ ಹತ್ಯೆಯಾದಾಗ ಸರ್ಕಾರ 25 ಲಕ್ಷ ರೂ.ಗಳ ಪರಿಹಾರ ನೀಡಿತ್ತು.ಅದೇ ಪರಿಹಾರದ ಹಣದಲ್ಲಿ ಅವರ ಸಹೋದರ ಸುಹಾಸ್ ಶೆಟ್ಟಿ ಹತ್ಯೆಗೆ ಸುಪಾರಿ ನೀಡಿದ್ದಾರೆ ಎಂದು ಪೊಲೀಸರು ಸುದ್ದಿ ಗೋಷ್ಠಿಯಲ್ಲಿ ತಿಳಿಸಿದ್ದು, ಸರ್ಕಾರದ ಹಣ ದುರ್ಬಳಕೆಯಾಗಿದೆಯೇ ಎಂಬ ಸುದ್ದಿಗಾರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಈ ಬಗ್ಗೆ ನನಗೆ ತಿಳಿದಿಲ್ಲ. ನಿನ್ನೆ ಸಚಿವ ದಿನೇಶ್ ಗುಂಡೂರಾವ್ ಹಾಗು ಗೃಹ ಸಚಿವ ಜಿ.ಪರಮೇಶ್ವರ್ ಇಬ್ಬರೂ ಮಂಗಳೂರಿಗೆ ಭೇಟಿ ನೀಡಿದ್ದಾರೆ. ಅವರೊಂದಿಗೆ ಮಾತನಾಡಿದ ನಂತರ ಪ್ರತಿಕ್ರಿಯೆ ನೀಡುವುದಾಗಿ ತಿಳಿಸಿದರು.

Comments (0)

Your email address will not be published. Required fields are marked *

Back to top button